ಬೆಂಗಳೂರು: ರಾಜ್ಯ ರಾಜಕಾರಣಕ್ಕೆ ಗಣಿಧಣಿ, ಮಾಜಿ ಸಚಿವ ಜನಾರ್ದನ ರೆಡ್ಡಿಯವರು ಹಿಂಬದಿ ಬಾಗಿಲಿನಿಂದ ನಿಧಾನವಾಗಿ ಎಂಟ್ರಿಯಾಗುತ್ತಿದ್ದಾರೆ.
ಹೌದು. ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಅವರು ಇತ್ತೀಚೆಗೆ ನಗರದಲ್ಲಿ ಗೌಪ್ಯ ಸಭೆ ನಡೆಸಿದ್ದಾರೆ. ರೆಡ್ಡಿ ಜನಾಂಗದ ಸುಮಾರು 300ಕ್ಕೂ ಹೆಚ್ಚು ಮಂದಿ ಜೊತೆ ಈ ಗೌಪ್ಯ ಸಭೆಯನ್ನು ನಡೆಸಿದ್ದಾರೆ. ಬೆಂಗಳೂರಿನ ಫಾರ್ಮ್‍ಹೌಸ್‍ನಲ್ಲಿ ನಡೆದ ಸಭೆಯಲ್ಲಿ ಸಿದ್ದರಾಮಯ್ಯ, ರಾಮಲಿಂಗಾರೆಡ್ಡಿ ಸೇರಿ ಹಲವರನ್ನು ಸೋಲಿಸಲು ರೆಡ್ಡಿ ರಣತಂತ್ರ ಹೂಡಿದ್ದಾರೆ ಎನ್ನಲಾಗಿದೆ.

ಜನಾರ್ದನ ರೆಡ್ಡಿಯವರ ರಾಜಕೀಯ ಎಂಟ್ರಿ ಬಗ್ಗೆ ರಾಜ್ಯದ ಯಾರೊಬ್ಬ ನಾಯಕರು ಮಾತನಾಡುತ್ತಿಲ್ಲ. ಕೇಂದ್ರದ ನಾಯಕರು ಕೂಡ ಈ ಬಗ್ಗೆ ಯಾವುದೇ ಚಕಾರ ಎತ್ತುತ್ತಿಲ್ಲ. ರಾಜ್ಯ ಬಿಜೆಪಿ ನಾಯಕರು ಅವರ ಹೆಸರನ್ನು ಪ್ರಸ್ತಾಪ ಮಾಡದಿದ್ದರೂ ಕೂಡ ರೆಡ್ಡಿಯವರು ರಾಜ್ಯ ರಾಜ್ಯಕಾರಣಕ್ಕೆ ಎಂಟ್ರಿ ಕೊಡುತ್ತಿರುವುದು ಅಚ್ಚರಿ ಮೂಡಿಸಿದೆ.
https://www.youtube.com/watch?v=Ur1RTMrWwaY




Leave a Reply