ಶಾಸಕರ ಮುಂದೆ ಕಣ್ಣೀರು ಹಾಕಿದ ಜೆಡಿಎಸ್ ಕಾರ್ಯಕರ್ತ!

ಮಂಡ್ಯ: ಜೆಡಿಎಸ್ ಕಾರ್ಯಕರ್ತರೊಬ್ಬರು ಶಾಸಕರ ಮುಂದೆ ಕಣ್ಣೀರು ಹಾಕಿ ತಮ್ಮ ಆಕ್ರೋಶ ಹೊರಹಾಕಿದ ಘಟನೆ ಮಂಡ್ಯದಲ್ಲಿ ನಡೆದಿದೆ.

ಕಾರ್ಯಕರ್ತ ನಿಂಗರಾಜು ಆಕ್ರೋಶ ಹೊರಹಾಕಿದ ಜೆಡಿಎಸ್ ಕಾರ್ಯಕರ್ತನಾಗಿದ್ದು, ಇವರು ಶಾಸಕ ಎಂ ಶ್ರೀನಿವಾಸ್ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್ ವಿರುದ್ಧ ಕಿಡಿಕಾರಿದ್ದಾರೆ.

ನನಗೆ ಟಿಕೆಟ್ ನೀಡಿದ್ರೆ ನಾನೇ ಗೆಲ್ತಿದ್ದೆ. ನನಗೆ ಅನ್ಯಾಯ ಮಾಡಿದ್ದೀರಿ. ನಾನು 20ವರ್ಷಗಳಿಂದ ಪಕ್ಷಕ್ಕೆ ದುಡಿದ್ದೀನಿ. ಇಂದು ನನ್ನ ಮನೆ ಹಾಳಾಗಿದೆ ಎಂದು ನೋವು ತೊಡಿಕೊಂಡಿಕೊಂಡಿದ್ದಾರೆ. ಈ ವೇಳೆ ಬೆಂಬಲಿಗರು ನೊಂದ ಕಾರ್ಯಕರ್ತನನ್ನು ಶಾಸಕರ ಕಚೇರಿಯಿಂದ ಹೊರ ಹಾಕಿದ್ದಾರೆ.

ನಿಂಗರಾಜು ಅವರ ಮಂಡ್ಯ ನಗರಸಭೆಯ 12ನೇ ವಾರ್ಡ್ ನಿಂದ ಸ್ಪರ್ಧಿಸಿದ್ದು, ನಾಲ್ಕನೇ ಸ್ಥಾನ ಪಡೆದಿದ್ದಾರೆ.

ಮಂಡ್ಯ ಹಿಂದುಳಿದ ನಗರವಾಗಿತ್ತು. ಇನ್ನು ಮುಂದೆ ಅಭಿವೃದ್ಧಿ ಪಥದತ್ತ ಸಾಗಲಿದೆ. ಸಿಎಂ ನಮ್ಮವರು, ಮಂಡ್ಯದಲ್ಲಿ ನಾನು ಶಾಸಕನಾಗಿದ್ದೇನೆ. ಈ ಹಿನ್ನೆಲೆಯಲ್ಲಿ ಅಭಿವೃದ್ಧಿ ಕೆಲಸ ಆಗಲಿದೆ. ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಕಾರ್ಯ ವೈಖರಿ ಮೆಚ್ಚಿ ಜನ ಬೆಂಬಲಿಸಿದ್ದಾರೆ ಅಂತ ಶಾಸಕ ಎಂ ಶ್ರೀನಿವಾಸ್ ಸಂತಸ್ ವ್ಯಕ್ತಪಡಿಸಿ ಜಿಲ್ಲೆಯ ಜನರಿಗೆ ಧನ್ಯವಾದ ಸಲ್ಲಿಸಿದ್ರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *