ನಮ್ಮ ಪಕ್ಷದಲ್ಲಿ ಅಸಮಾಧಾನ ಇಲ್ಲ, ಕಾಂಗ್ರೆಸ್‍ನಲ್ಲಿದೆ: ಸಿಎಂ ಎಚ್‍ಡಿಕೆ

ಬೆಂಗಳೂರು: ನಮ್ಮ ಪಕ್ಷದಲ್ಲಿ ಅಂತಹ ದೊಡ್ಡ ಅಸಮಾಧಾನ ಏನು ಇಲ್ಲ ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತೇನೆ ಎಂದು ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಹೆಚ್ ವಿಶ್ವನಾಥ್ ಸಚಿವ ಸ್ಥಾನಕ್ಕಾಗಿ ಅಸಮಾಧಾನಗೊಂಡಿಲ್ಲ. ಬೆಳಿಗ್ಗೆ ನನ್ನ ಜೊತೆಯೇ ತಿಂಡಿ ಮಾಡಿದ್ದಾರೆ. ನಮ್ಮ ಪಕ್ಷದಲ್ಲಿ ಕೆಲವರಲ್ಲಿ ಅಸಮಾಧಾನ ಇದೆ ಅದನ್ನು ಸರಿಪಡಿಸುವ ಕೆಲಸ ಮಾಡ್ತಿದ್ದೇನೆ ಎಂದು ತಿಳಿಸಿದರು.

ಕಾಂಗ್ರೆಸ್ ನಲ್ಲಿ ಸಚಿವಾಕಾಂಕ್ಷಿಗಳಾಗಿದ್ದವರಲ್ಲಿ ಕೆಲವರು ಆಕ್ರೋಶ ಅಸಮಾಧಾನ ವ್ಯಕ್ತಪಡಿಸುತ್ತಿರುವುದನ್ನು ಸರಿಪಡಿಸುವುದು ನನ್ನ ಕೈಯಲ್ಲಿ ಇಲ್ಲ, ಕಾಂಗ್ರೆಸ್ ನಾಯಕರುಗಳು ಕ್ರಮ ತೆಗೆದುಕೊಳ್ಳಬೇಕು ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಸರ್ಕಾರ ಇರುವುದರಿಂದ ನಮ್ಮ ಮೇಲೂ ಜವಾಬ್ದಾರಿ ಇದೆ ಎಂದು ಹೇಳಿದರು.

ವೈಯಕ್ತಿಕವಾಗಿ ನೇರವಾಗಿ ಸಂಬಂಧ ಇಲ್ಲದಿದ್ದರೂ ಸರ್ಕಾರ ಸಧೃಡವಾಗಿ ಇರವಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲೂ ಇದೆ. ಅಸಮಾಧಾನಗೊಂಡಿರುವ ಕಾಂಗ್ರೆಸ್ ನಾಯಕರುಗಳ ಆಕ್ರೋಶಕ್ಕೆ ಕಾರಣವನ್ನು ಗ್ರಹಿಸಿದ್ದೇನೆ. ದೆಹಲಿಯ ಕೇಂದ್ರ ನಾಯಕರುಗಳಿಗೆ ಸಮಸ್ಯೆಯನ್ನು ಬಗೆಹರಿಸುವಂತೆ ಮನವಿ ಮಾಡುತ್ತೇವೆ. ಎಲ್ಲಿ ಎಡವಿದ್ದೇವೆ ಎಂದು ತಿಳಿದು ಸರಿಪಡಿಸಿಕೊಂಡಾಗ ಸರ್ಕಾರ ಸುಸೂತ್ರವಾಗಿ ನಡೆಯುವ ಅವಕಾಶ ಇರುತ್ತದೆ ಎಂದು ಇದೇ ವೇಳೆ ತಿಳಿಸಿದರು.

 

Comments

Leave a Reply

Your email address will not be published. Required fields are marked *