ಬೆಂಗಳೂರು: ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ನೋಡಲು ಜೆಡಿಎಸ್ ಬಹುತೇಕ ಶಾಸಕರು ನಿರಾಸಕ್ತಿ ತೋರಿಸಿದ್ದಾರೆ.
ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಸೇರಿದಂತೆ ಬಹುತೇಕ ಜೆಡಿಎಸ್ ಶಾಸಕರಿಂದ ಕಾಶ್ಮೀರಿ ಫೈಲ್ಸ್ ಸಿನಿಮಾ ವೀಕ್ಷಣೆಗೆ ನಿರಾಸಕ್ತಿ ತೋರಿದ್ದಾರೆ.
ಕಾಶ್ಮೀರಿ ಪಂಡಿತರ ವಲಸೆ ಮತ್ತು ಹತ್ಯಾಕಾಂಡ ಕುರಿತ ಚಿತ್ರ ʼದಿ ಕಾಶ್ಮೀರ್ ಫೈಲ್ಸ್’ ವೀಕ್ಷಣೆಗೆ ಮಂಗಳವಾರ ವಿಧಾನಸಭೆ ಸದಸ್ಯರಿಗೆ ಅವಕಾಶ ಮಾಡಿಕೊಡಲಾಗಿದೆ. ಈ ಸಂಬಂಧ ವಿಧಾನಸಭೆ ಕಲಾಪದಲ್ಲಿಂದು ವಿಶ್ವೇಶ್ವರ ಹೆಗಡೆ ಕಾಗೇರಿ ಘೋಷಣೆ ಮಾಡಿದರು. ಆಡಳಿತ ಮತ್ತು ವಿಪಕ್ಷಗಳ ಸದಸ್ಯರಿಗೆ ಚಿತ್ರ ವೀಕ್ಷಣೆಗೆ ಆಹ್ವಾನ ನೀಡಿದರು. ಇದನ್ನೂ ಓದಿ: ಕಾಶ್ಮೀರದಲ್ಲಿದ್ದ ನನ್ನ ಪೂರ್ವಜರು ನೋವು ತಿಂದೆ ಕಾಶ್ಮೀರ ಬಿಟ್ಟರು : ಅನಂತ್ ನಾಗ್ ಬಿಚ್ಚಿಟ್ಟ ಕಾಶ್ಮೀರಿ ಕ್ರೌರ್ಯ

ಸಂಜೆ 6:45 ಕ್ಕೆ ಮಂತ್ರಿ ಮಾಲ್ನಲ್ಲಿ ಶಾಸಕರಿಗೆ ಸಿನಿಮಾ ವೀಕ್ಷಣೆಗೆ ವಿಧಾನಸಭೆ ಸಚಿವಾಲಯದಿಂದ ವ್ಯವಸ್ಥೆ ಮಾಡಲಾಗಿದೆ. ಸಿನಿಮಾಗೆ ಸರ್ಕಾರ ತೆರಿಗೆ ವಿನಾಯಿತಿ ನೀಡಿದ್ದಕ್ಕೆ ಸ್ಪೀಕರ್ ಕಾಗೇರಿ ಇದೇ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದರು.ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ : ಅಂಥದ್ದೇನಿದೆ ಸಿನಿಮಾದಲ್ಲಿ? ದಳ್ಳುರಿಯಲ್ಲಿ ದಹನದ ಕಥನ!
ಶಾಸಕರು ಹಾಗೂ ಸಚಿವರು ಸಿನಿಮಾ ವೀಕ್ಷಿಸಲು ಬರಬೇಕು. ಎಲ್ಲರೂ ಜೊತೆಗೂಡಿ ನೋಡೋಣ. ವಿರೋಧ ಪಕ್ಷಗಳ ಸದಸ್ಯರೂ ಸಿನಿಮಾ ನೋಡಲು ಬರಬೇಕು ಎಂದು ಸ್ಪೀಕರ್ ಆಹ್ವಾನ ನೀಡಿದರು. ಭಾನುವಾರ ಸಿಎಂ ಬೊಮ್ಮಾಯಿ ಹಾಗೂ ಸಚಿವ ಮುನಿರತ್ನ ಸಹ ಸಿನಿಮಾ ವೀಕ್ಷಣೆ ಮಾಡಿದರು. ಬಳಿಕ ಸಿಎಂ ಈ ಚಿತ್ರಕ್ಕೆ ಶೇ.100 ತೆರಿಗೆ ವಿನಾಯಿತಿ ಘೋಷಣೆ ಮಾಡಿದರು. ಇದನ್ನೂ ಓದಿ: ಏನದು ಸಿನಿಮಾ? ನಾನು ಹೋಗಲ್ಲ: ಸ್ಪೀಕರ್ ಆಹ್ವಾನ ತಿರಸ್ಕರಿಸಿದ ಸಿದ್ದು

Leave a Reply