ಮೈಸೂರು: ಜಿಲ್ಲೆಯ ಶಿಕ್ಷಕರಿಗೆ ಹೊಸ ವಸ್ತ್ರಸಂಹಿತೆ ಜಾರಿ ಮಾಡಲಾಗಿದ್ದು, ಶಿಕ್ಷಕರಿಗೆ ಜೀನ್ಸ್ ಪ್ಯಾಂಟ್ ಬ್ಯಾನ್ ಮಾಡಲಾಗಿದೆ.

ಶಿಕ್ಷಕರು ಕರ್ತವ್ಯದಲ್ಲಿರುವ ವೇಳೆ ಜೀನ್ಸ್ ಪ್ಯಾಂಟ್ ಹಾಗೂ ಟಿ-ಶರ್ಟ್ ಧರಿಸುವಂತಿಲ್ಲ ಎಂದು ಮೈಸೂರು ಡಿಡಿಪಿಐ ಶ್ರೀನಿವಾಸಮೂರ್ತಿ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಉಪನಿರ್ದೇಶಕರ ಕಚೇರಿ ಮತ್ತು ಕಾಲೇಜುಗಳಲ್ಲಿ ಪ್ರಾಂಶುಪಾಲರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗೆ ಆದೇಶ ಅನ್ವಯ ಆಗಲಿದೆ. ಮೈಸೂರು ಜಿಲ್ಲಾಧಿಕಾರಿಗಳ ಮೌಖಿಕ ಸೂಚನೆ ಮೇರೆಗೆ ಡಿಡಿಪಿಐ ಈ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಜಿಮ್ ಮಾಡೋವ್ರಿಗೆ ಅಪ್ಪು ಸಾವು ಬಿಗ್ ಶಾಕ್ – ಜಿಮ್‍ಗೆ ಹೋಗದಂತೆ ಮಕ್ಕಳಿಗೆ ಪೋಷಕರ ಆಕ್ಷೇಪ

ಕಾಲೇಜು ವಿದ್ಯಾರ್ಥಿಗಳಿಗೆ ಕಾಲೇಜು ಆಡಳಿತ ಮಂಡಳಿ ವಸ್ತ್ರ ಸಂಹಿತೆ ಹೇರುವುದು, ಡ್ರೆಸ್ ಕೋಡ್ ಆದೇಶ ವಿವಾದಕ್ಕೆ ಗುರಿಯಾಗುವುದನ್ನು ಕೇಳಿದ್ದೆವು. ಈಗ ಕಾಲೇಜು ಶಿಕ್ಷಕರಿಗೂ ಕಾಲೇಜಿನಲ್ಲಿ ಕೆಲಸ ಮಾಡುವ ಸಿಬ್ಬಂದಿಗೂ ಡ್ರೆಸ್ ಕೋಡ್ ಬಂದಿದೆ. ಇದನ್ನೂ ಓದಿ: ಕೇರಳದಲ್ಲಿ120 ವರ್ಷಗಳಲ್ಲಿಯೇ ಅತ್ಯಧಿಕ ಮಳೆ

Leave a Reply