ಬಿಜೆಪಿ ಪಾದಯಾತ್ರೆ – ಭಾಗಿಯಾಗಲು ಷರತ್ತು ವಿಧಿಸಿದ ಹೆಚ್‌ಡಿಕೆ

ನವದೆಹಲಿ: ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಬಿಜೆಪಿ ಬೆಂಗಳೂರಿನಿಂದ ಮೈಸೂರಿಗೆ ನಡೆಸಲು ಮುಂದಾಗಿರುವ ಪಾದಯಾತ್ರೆಗೆ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಷರತ್ತು ಹಾಕಿರುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

ಹಾಸನದ ಮಾಜಿ ಬಿಜೆಪಿ ಶಾಸಕ ಪ್ರೀತಂ ಗೌಡ (Preetham Gowda) ವಿರುದ್ಧ ಮಂಗಳವಾರ ಕಿಡಿ ಕಾರಿದ್ದ ಹೆಚ್‌ಡಿ ಕುಮಾರಸ್ವಾಮಿ ಪಾದಯಾತ್ರೆಗೆ ಜೆಡಿಎಸ್‌ (JDS) ಬೆಂಬಲ ಇಲ್ಲ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು.

ಬಹಿರಂಗ ಹೇಳಿಕೆ ನೀಡುವ ಮೂಲಕ ರಾಜ್ಯದ-ಬಿಜೆಪಿ ಜೆಡಿಎಸ್‌ ಮೈತ್ರಿಗೆ ಬಗ್ಗೆ ಪ್ರಶ್ನೆಗಳು ಎದ್ದ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್‌ ಚುರುಕಾಗಿದೆ. ಇದನ್ನೂ ಓದಿ: ದರ್ಶನ್‌ಗೆ ಜೈಲೇ ಗತಿ – ಆಗಸ್ಟ್‌ 14ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

 

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಜೆಪಿ ನಡ್ಡಾ (JP Nadda) ಅವರು ದೂರವಾಣಿ ಮೂಲಕ ಹೆಚ್‌ಡಿಕೆ ಜೊತೆ ಮಾತನಾಡಿ ಪಾದಯಾತ್ರೆಯಲ್ಲಿ ಭಾಗಿಯಾಗುವಂತೆ ಮನವಿ ಮಾಡಿದ್ದಾರೆ. ಈ ವೇಳೆ ಪ್ರೀತಂಗೌಡ ಪಾದಯಾತ್ರೆಗೆ ಬಾರದೇ ಇದ್ದರೆ ನಾನು ಭಾಗಿಯಾಗುತ್ತೇನೆ ಎಂದು ಷರತ್ತು ವಿಧಿಸಿದ್ದಾರೆ. ಇದನ್ನೂ ಓದಿ: ಮುಡಾ ಹಗರಣ; ಸಿಎಂ ಪರವಾಗಿ ಸಂಪುಟ ನಿರ್ಣಯ

ಮಂಗಳವಾರ ಹೆಚ್‌ಡಿಕೆ ಹೇಳಿದ್ದೇನು?
ದೆಹಲಿಯಲ್ಲಿ ಮಾಧ್ಯಮಗಳ ಜತೆ ಮಾತನಾಡುತ್ತಾ ಖಾರವಾಗಿ ಪ್ರತಿಕ್ರಿಯಿಸಿದ ಹೆಚ್‌ಡಿಕೆ, ದೇವೇಗೌಡರ (Devegowda) ಕುಟುಂಬವನ್ನು ನಾಶ ಮಾಡಲು ಹೊರಟ ಪ್ರೀತಂಗೌಡನನ್ನು ಸಭೆಯಲ್ಲಿ ಕೂರಿಸಿಕೊಂಡು, ನನ್ನನ್ನ ಸಭೆಗೆ ಕರೆಯುತ್ತೀರಾ? ಪೆನ್ ಡ್ರೈವ್ ಗಳನ್ನು ಹಂಚಿವರು ಯಾರು ಎಂದು ಗೊತ್ತಿಲ್ಲವೇ? ಚುನಾವಣಾ ಮೈತ್ರಿಯೇ ಬೇರೆ. ರಾಜಕೀಯವೇ ಬೇರೆ ಎಂದು ಕಿಡಿಕಾರಿದರು.

 

ಈ ಪ್ರೀತಂಗೌಡ ಯಾರು? ಹಾಸನದಲ್ಲಿ ಹಾದಿಬೀದಿಯಲ್ಲಿ ಪೆನ್ ಡ್ರೈವ್‌ಗಳನ್ನು ಹಂಚಿದವರು ಯಾರೆನ್ನುವುದು ಗೊತ್ತಿದೆ. ದೇವೇಗೌಡರ ಕುಟುಂಬಕ್ಕೆ ವಿಷ ಇಟ್ಟುವನು ಈ ವ್ಯಕ್ತಿ. ಅಂತಹ ವ್ಯಕ್ತಿಯ ಜತೆಯಲ್ಲಿ ನಾವು ವೇದಿಕೆ ಮೇಲೆ ಕೂರಲು ಸಾಧ್ಯವೇ ಇಲ್ಲವಿಲ್ಲ ಎಂದು ಹೇಳುವ ಮೂಲಕ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.