ವಕ್ಫ್ ವಿವಾದ; ಹುಬ್ಬಳ್ಳಿಗೆ ವಕ್ಫ್ ಜಂಟಿ ಸಂಸದೀಯ ಮಂಡಳಿ ಅಧ್ಯಕ್ಷ ಭೇಟಿ – ರೈತರಿಂದ ಅಹವಾಲು ಸ್ವೀಕಾರ

ಹುಬ್ಬಳ್ಳಿ: ವಕ್ಫ್ ಬೋರ್ಡ್ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ವಕ್ಫ್ ಬೋರ್ಡ್ ಸಂಸದೀಯ ಜಂಟಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಹುಬ್ಬಳ್ಳಿಗೆ ಭೇಟಿ ನೀಡಿ ಅಹವಾಲು ಸ್ವೀಕರಿಸಿದರು.

ಹುಬ್ಬಳ್ಳಿಗೆ ಆಗಮಿಸಿದ ಪಾಲ್ ನೇತೃತ್ವದ ಸಮಿತಿಗೆ ಶಾಸಕ ಮಹೇಶ್ ಟೆಂಗಿನಕಾಯಿ ಸ್ವಾಗತ ಕೋರಿದರು. ವಿವಾದದ ಕುರಿತು ಮಾತನಾಡಿದ ಜಗದಾಂಬಿಕಾ ಪಾಲ್, ವಕ್ಫ್ ಬೋರ್ಡ್ ಆಸ್ತಿ ಕಬಳಿಸುವ ಆರೋಪ ಕೇಳಿಬಂದಿದೆ. ಕರ್ನಾಟಕ ಜನರ ಸಮಸ್ಯೆಗಳ ಆಲಿಸಲು ಬಂದಿದ್ದೇನೆ. ಇದರ ವಿಸ್ತೃತ ವರದಿ ಸಿದ್ಧಪಡಿಸಿ ಸ್ವೀಕಾರಕ್ಕೆ ನೀಡಲಾಗುವುದು. ಕರ್ನಾಟಕದ ರೈತರು, ಜನಸಾಮಾನ್ಯರ ಆಸ್ತಿಗಳನ್ನು ಕಬಳಿಕೆ ಮಾಡಿದ್ದಾರೆ ಎಂದು ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಉತ್ತರ ಕರ್ನಾಟಕ ಭಾಗದ ಸುಮಾರು 50 ರಿಂದ 60 ವರ್ಷಗಳಿಂದ ಉಳಿಮೆ ಮಾಡಿದ ಜಮೀನು. ದೇವಸ್ಥಾನಗಳ ಕಬಳಿಸಲಾಗಿದೆ ಎನ್ನಲಾಗುತ್ತಿದೆ. ಈ ಹಿನ್ನೆಲೆ ಹುಬ್ಬಳ್ಳಿ, ವಿಜಯಪುರ, ಬೀದರ್ ರೈತರ ಹಾಗೂ ಜನರ ಅಹವಾಲು ಸ್ವೀಕರಿಸುತ್ತೇನೆ. ಸದ್ಯ ಹುಬ್ಬಳ್ಳಿಯಲ್ಲಿ ಅದ್ವೈತ್ ಪರಿಷತ್ ಉತ್ತರ ಕರ್ನಾಟಕ ಹಾಗೂ ರತ್ನ ಭಾರತ ರೈತ ಸಮಾಜದವರು ಮನವಿ ಸಲ್ಲಿಸಿದ್ದಾರೆ. ಇದನ್ನು ಸಹ ಪರಿಗಣಿಸಲಾಗುವುದು ಎಂದು ಪಾಲ್ ತಿಳಿಸಿದರು.

ವಕ್ಫ್ ಜಂಟಿ ಸಂಸದೀಯ ಸಮಿತಿಯಿಂದ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಸಲಾಯಿತು. ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆ ವೇಳೆ ರೈತರಿಂದ ಮನವಿ ಸ್ವೀಕರಿಸಲಾಯಿತು. ಸಂಸದ ತೇಜಸ್ವಿ ಸೂರ್ಯ, ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್, ಗೋವಿಂದ ಕಾರಜೋಳ, ಶಾಸಕ ಮಹೇಶ್ ಟೆಂಗಿನಕಾಯಿ, ಛಲವಾದಿ ನಾರಾಯಣಸ್ವಾಮಿ ಸಾಥ್ ನೀಡಿದರು. ಉತ್ತರ ಕರ್ನಾಟಕದ ಪ್ರಮುಖ ಜಿಲ್ಲಾ ರೈತರ ಮುಖಂಡರು, ಹಿಂದೂಪರ ಸಂಘಟನೆಗಳ ಪದಾಧಿಕಾರಿಗಳು ಭಾಗಿಯಾಗಿದ್ದರು.

ಸತ್ಯ ಶೋಧನಾ ಸಮಿತಿಯಿಂದ ಜಂಟಿ ಸಂಸದೀಯ ಕಮಿಟಿಗೆ ವರದಿ ಸಲ್ಲಿಕೆ ಮಾಡಲಾಯಿತು. ಗೋವಿಂದ ಕಾರಜೋಳ ನೇತೃತ್ವದಲ್ಲಿ ನಡೆದಿದ್ದ ವಕ್ಫ್ ಬೋರ್ಡ್ ಆಸ್ತಿ ನೋಟಿಸ್ ತನಿಖೆ. ವಿಜಯಪುರ ಜಿಲ್ಲೆಯ ಸೇರಿದಂತೆ ವಿವಿಧ ಕಡೆ ತೆರಳಿ ವರದಿ ಸಲ್ಲಿಸಿರುವ ಬಿಜೆಪಿ ಸತ್ಯ ಶೋಧನಾ ಸಮಿತಿಯ ಪದಾಧಿಕಾರಿಗಳು ಭಾಗಿಯಾಗಿದ್ದರು.