ಮಾಧ್ಯಮಗಳ ಮುಂದೆ ಹೀರೋ ಆಗೋದು ಬೇಡ-ಜಾರಕಿಹೊಳಿ ಬ್ರದರ್ಸ್ ಗೆ ಕೆ.ಎಚ್.ಮುನಿಯಪ್ಪ ಸಲಹೆ

ಬೆಂಗಳೂರು: ಏನೇ ಸಮಸ್ಯೆಗಳಿದ್ದರೂ ಪಕ್ಷದೊಳಗೆ ಬಗೆಹರಿಸಿಕೊಳ್ಳಬೇಕು. ಅದನ್ನು ಬಿಟ್ಟು ಜಾರಕಿಹೊಳಿ ಸಹೋದರರು ಮಾಧ್ಯಮಗಳ ಮುಂದೆ ಹೀರೋ ಆಗೋದು ಬೇಡ ಎಂದು ಸಂಸದ ಕೆ.ಎಚ್.ಮುನಿಯಪ್ಪ ಸಲಹೆ ನೀಡಿದರು.

ಶನಿವಾರ ಕುಮಾರಕೃಪ ಅತಿಥಿ ಗೃಹದಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಕೆ.ಎಚ್.ಮುನಿಯಪ್ಪ, ಕಾಂಗ್ರೆಸ್ ಶಿಸ್ತಿನ ಪಕ್ಷವಾಗಿದ್ದು, ಯಾರು ಅಶಿಸ್ತಿನಿಂದ ನಡೆದುಕೊಳ್ಳಬಾರದು, ಜಾರಕಿಹೊಳಿ ಸಹೋದರರ ಅಶಿಸ್ತಿಗೆ ಕಡಿವಾಣ ಹಾಕಲು ಸಲಹೆ ನೀಡಿದ್ದೇನೆ. ಏನೇ ಸಮಸ್ಯೆ ಇದ್ರೂ ಪಕ್ಷದ ಚೌಕಟ್ಟಿನೊಳಗೆ ಚರ್ಚಿಸಬೇಕು ಅಲ್ಲೇ ಇತ್ಯರ್ಥಪಡಿಸಿಕೊಳ್ಳಬೇಕು. ನಾನು ಪಕ್ಷದ ಹಿರಿಯ ನಾಯಕನಾಗಿದ್ದು ಪಕ್ಷದ ಪ್ರಧಾನ ಕಾರ್ಯದರ್ಶಿಗಳಿಗೆ ಕೆಲವೊಂದು ಸಲಹೆ ನೀಡಿದ್ದೇನೆ. ಸಚಿವ ಸಂಪುಟದ ವಿಸ್ತರಣೆ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ ಅಂತ ಸಂಸದ ಕೆ.ಎಚ್.ಮುನಿಯಪ್ಪ ಹೇಳಿದರು.

ಜಾರಕಿಹೊಳಿ ಸಹೋದರರನ್ನು ಬಿಜೆಪಿ ಸಂಪರ್ಕಿಸಿದ್ದು, ಆಪರೇಷನ್ ಕಮಲದಡಿಯಲ್ಲಿ ಪಕ್ಷಕ್ಕೆ ಕರೆತರುವ ಸಿದ್ಧತೆಯೂ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ರಮೇಶ್ ಜಾರಕಿಹೊಳಿ, ಸಿದ್ದರಾಮಯ್ಯ ಬಂದ ಮೇಲೆ ತಮ್ಮ ಮುಂದಿನ ನಿರ್ಧಾರ ತಿಳಿಸುವುದಾಗಿ ಸ್ಪಷ್ಟಪಡಿಸಿದ್ದಾರೆ. ಇಂದು ಜಾರಕಿಹೊಳಿ ಸಹೋದರರ ಸಿದ್ದರಾಮಯ್ಯನವರನ್ನು ಭೇಟಿ ಆಗಲಿದ್ದಾರೆ.

ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಜಾರಕಿಹೊಳಿ ಸಹೋದರರ ಸಮಸ್ಯೆ ಬಗ್ಗೆ ಮಾಹಿತಿಗಳಿಲ್ಲ. ವಿದೇಶ ಪ್ರವಾಸ ಚೆನ್ನಾಗಿತ್ತು. ಪ್ರಸ್ತುತ ಯಾವುದೇ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿ ಇಲ್ಲ. ಕಾಂಗ್ರೆಸ್ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅವರು ಯಾವಗಲೂ ಸುಳ್ಳುಗಳನ್ನು ಹೇಳಿಕೊಂಡು ಬರುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅಗತ್ಯ ಬಿದ್ದರೆ ಮಾತ್ರ ಸಮನ್ವಯ ಸಮಿತಿ ಕರೆಯಲಾಗುತ್ತದೆ ಎಂದು ಸ್ಪಷ್ಟನೆ ನೀಡಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *