ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಯೋ? ಕೊಲೆಯೋ: ಈಶ್ವರಪ್ಪ ಅನುಮಾನ

Eshwarappa

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಯ ಪ್ರಕರಣದ ಬಗ್ಗೆ ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ? ಸಂತೋಷ್ ಪಾಟೀಲ್ ಯಾರದ್ದೋ ಕುತಂತ್ರಕ್ಕೆ ಬಲಿಯಾದನೋ ಎಂಬ ಬಗ್ಗೆ ಅನುಮಾನ ಇದೆ. ಹಾಗಾಗಿ ಶೀಘ್ರ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಅವರ ಬಳಿ ಮನವಿ ಮಾಡಿದ್ದೇನೆ ಎಂದು ಮಾಜಿ ಸಚಿವ ಈಶ್ವರಪ್ಪ ತಿಳಿಸಿದರು.

DK SHIVAKUMAR

ಈ ಕುರಿತು ಮಾಧ್ಯಮದವರ ಜೊತೆ ಮಾತನಾಡಿದ ಅವರು, ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ ಎಂಬುದು ಅನೇಕರ ಅಭಿಪ್ರಾಯ. ಈ ಬಗ್ಗೆ ಬೇರೆಯವರ ಜೊತೆ ಮಾತನಾಡಿದಾಗ ಅವರು ಸಹ ಅನುಮಾನ ವ್ಯಕ್ತಪಡಿಸುತ್ತಾರೆ. ಈ ಪ್ರಕರಣದಲ್ಲಿ ಸಂತೋಷ್ ಪಾಟೀಲ್ ಅವನನ್ನು ಯಾರೋ ದುರುಪಯೋಗ ಪಡಿಸಿಕೊಂಡಿದ್ದಾರೆ. ಹೀಗಾಗಿ ಪ್ರಕರಣದ ತನಿಖೆ ಶೀಘ್ರ ಮುಗಿದು ಇದರ ಹಿಂದೆ ಯಾರಿದ್ದಾರೆ ಎಂಬ ಅಂಶ ಬಹಿರಂಗ ಆಗಬೇಕಿದೆ ಎಂದರು. ಇದನ್ನೂ ಓದಿ: ಈ ಕಾಂಗ್ರೆಸ್‍ನವರು ದರಿದ್ರ ನನ್ಮಕ್ಕಳು, ಅವರ ಜೊತೆ ಹೋಗಬಾರದಿತ್ತು: ನಂಜೇಗೌಡ

ಪ್ರಕರಣ ಕುರಿತು ಈಗಾಗಲೇ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಹೀಗಾಗಿ ಈ ಘಟನೆ ಹಿಂದೆ ಡಿ.ಕೆ.ಶಿವಕುಮಾರ್ ಇದ್ದಾರೋ, ಇಲ್ಲವೋ ಎಂಬುದರ ಬಗ್ಗೆ ಈಗಲೇ ಏನು ಹೇಳುವುದಿಲ್ಲ. ತನಿಖೆ ಮುಗಿಯಲಿ, ಸತ್ಯಾಂಶ ಹೊರ ಬರಲಿ. ತನಿಖೆ ವೇಳೆ ಡಿಕೆಶಿ ಹೆಸರು ಪ್ರಸ್ತಾಪಿಸಲು ಹೋಗುವುದಿಲ್ಲ. ತನಿಖೆ ಮುಗಿದು ವರದಿ ಬರಲಿ. ಏನಾದರೂ ಡಿಕೆಶಿ ಕೈವಾಡ ಇದೆ ಅಂತಾದರೆ ಈ ಬಗ್ಗೆ ನಂತರ ಮಾತನಾಡುತ್ತೇನೆ ಎಂದರು.  ಇದನ್ನೂ ಓದಿ: ಪಾಲಕ್ಕಾಡ್‍ನಲ್ಲಿ RSS ಮುಖಂಡ ಹತ್ಯೆ

Comments

Leave a Reply

Your email address will not be published. Required fields are marked *