ನೊಣವಿನಕೆರೆ ಕಾಡಸಿದ್ದೇಶ್ವರ ಮಠದಲ್ಲಿ ಶ್ರೀಗಳ ಆಶೀರ್ವಾದ ಪಡೆದ ಡಿಕೆಶಿ

ತುಮಕೂರು: ಜಿಲ್ಲೆಯ ನೊಣವಿನಕೆರೆಯ ಕಾಡಸಿದ್ದೇಶ್ವರ ಮಠದಲ್ಲಿ ನಡೆದ ಶ್ರೀ ಕರಿಬಸವ ಸ್ವಾಮಿಗಳ 227ನೇ ವಾರ್ಷಿಕ ಸ್ಮರಣೋತ್ಸವ ಹಾಗೂ ಇತರೆ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಭಾಗಿಯಾಗಿದ್ದರು.

ಕಾಡಸಿದ್ದೇಶ್ವರ ಮಠದಲ್ಲಿ ಇಂದು ಶ್ರೀ ಕರಿಬಸವ ಸ್ವಾಮಿಗಳ 227ನೇ ವಾರ್ಷಿಕ ಸ್ಮರಣೋತ್ಸವ ಹಾಗೂ ಶ್ರೀ ಮಠದ 19ನೇ ಗುರುಗಳಾದ ಶ್ರೀ ಮ.ನಿ.ಪ್ರ ಕರಿಬಸವ ದೇಶಿಕೇಂದ್ರ ಮಹಾಸ್ವಾಮಿಗಳ 12ನೇ ವರ್ಷದ ಪುಣ್ಯಾರಾಧನೆ ನಡೆಯಿತು. ಜೊತೆಗೆ ಇತರೆ ಸಾಮೂಹಿಕ ಕಾರ್ಯಕ್ರಮಗಳನ್ನು ಕೂಡ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಗಳಲ್ಲಿ ಡಿಕೆ ಶಿವಕುಮಾರ್ ಅವರು ಭಾಗವಹಿಸಿ, ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿಯವರ ಆಶೀರ್ವಾದ ಪಡೆದರು.

ಅಷ್ಟೇ ಅಲ್ಲದೆ ಇಂದು ವಿಧಾನಸಭಾ ಅಧಿವೇಶನದ ನಡುವೆಯೂ ಸಿಎಂ ಬಿಎಸ್ ಯಡಿಯೂರಪ್ಪ ಅವರು ಕಾಡಸಿದ್ದೇಶ್ವರ ಮಠದ ಜಾತ್ರಾಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.

ಹೆಲಿಕಾಪ್ಟರ್ ಮೂಲಕ ಬೆಳಗ್ಗೆ 9:30ಕ್ಕೆ ಮಠಕ್ಕೆ ಆಗಮಿಸಿದ ಸಿಎಂ, ಮೃತ್ಯುಂಜಯ ಹೋಮ, ರುದ್ರ ಹೋಮ, ಜಯಾದಿ ಹೋಮದಲ್ಲಿ ಭಾಗಿಯಾಗಿ ಪೂಜೆ ಸಲ್ಲಿಸಿದರು. ಬಳಿಕ ಕಾಡುಸಿದ್ದೇಶ್ವರ ಮಠದ ಕರಿವೃಷಭ ಶಿವಯೋಗೇಶ್ವರ ಶ್ರೀಗಳ ಆಶೀರ್ವಾದ ಪಡೆದರು.

ವೇದಿಕೆ ಕಾರ್ಯಕ್ರಮದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ಕಾಡಸಿದ್ದೇಶ್ವರ ಮಠದ ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಸೇವೆಯ ಗುಣಗಾನ ಮಾಡಿದರು. ಅಲ್ಲದೆ ರಾಜ್ಯ ಸರ್ಕಾರದ ವತಿಯಿಂದ ಮಠದ ಅಭಿವೃದ್ಧಿಗೆ ಸಹಾಯ ಮಾಡಲಾಗುವುದು ಎಂದು ಭರವಸೆ ನೀಡಿದರು. ಅಧಿವೇಶನಕ್ಕೆ ವಿಳಂಬವಾಗುವ ಹಿನ್ನೆಲೆಯಲ್ಲಿ ಚುಟುಕಾಗಿ ಭಾಷಣ ಮುಗಿಸಿ ಜಾತ್ರೆಯಿಂದ ಸಿಎಂ ವಿಧಾನಸೌಧದತ್ತ ಪಯಣ ಬೆಳೆಸಿದರು.

Comments

Leave a Reply

Your email address will not be published. Required fields are marked *