ಕಂಗನಾ ರಣಾವತ್ ಗೋಮಾಂಸ ಇಷ್ಟ ಎಂದಿದ್ದರು: ಕೈ ನಾಯಕ ವಿವಾದಾತ್ಮಕ ಹೇಳಿಕೆ

ಮುಂಬೈ: ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿಯ ಲೋಕಸಭಾ ಅಭ್ಯರ್ಥಿ, ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut) ಅವರು ನನಗೆ ಗೋಮಾಂಸ ಇಷ್ಟ ಅಂದಿದ್ದರು ಎಂದು ಕಾಂಗ್ರೆಸ್ ನಾಯಕ ವಿಜಯ್ ವಾಡೆತ್ತಿವಾರ್ (Vijay Wadettiwar)  ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ತಾನು ಗೋಮಾಂಸವನ್ನು ಇಷ್ಟಪಡುತ್ತೇನೆ ಮತ್ತು ತಿನ್ನುತ್ತೇನೆ ಎಂದು ಎಕ್ಸ್‌ನಲ್ಲಿ ಬರೆದಿದ್ದ ರಣಾವತ್‌ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ ಅಂತಾ ಆರೋಪಿಸಿದರು.

ವಡೆತ್ತಿವಾರ್ ಅವರ ಹೇಳಿಕೆಗೆ ಬಿಜೆಪಿ ವಕ್ತಾರ ಕೇಶವ ಉಪಾಧ್ಯೆ ಪ್ರತಿಕ್ರಿಯಿಸಿದ್ದು, ಇದು ಕಾಂಗ್ರೆಸ್‌ನ ಕೊಳಕು ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ. ಇದು ಪಕ್ಷದ ಸೋಲಿನ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಕಳವಾಗಿದ್ದ ಜೆಪಿ ನಡ್ಡಾ ಪತ್ನಿಯ ಕಾರು ಪತ್ತೆ- ಇಬ್ಬರ ಬಂಧನ

ಬಿಜೆಪಿ ನಾಯಕಿ ಶೈನಾ ಎನ್‌ಸಿ ಅವರು ಕಾಂಗ್ರೆಸ್ ಅನ್ನು “ಮಹಿಳಾ ವಿರೋಧಿ” ಎಂದು ಆರೋಪಿಸಿದರು. ಅಲ್ಲದೇ ಜೂನ್ 4 ರಂದು ಭಾರತದ ಮಹಿಳೆಯರು ಕಾಂಗ್ರೆಸ್ ಎಂಬ ಮಹಿಳಾ ವಿರೋಧಿ ಪಕ್ಷದ ವಿರುದ್ಧ ಮಾತನಾಡುತ್ತಾರೆ ಮತ್ತು ಮತ ಚಲಾಯಿಸಿದಾಗ ಅದಕ್ಕೆ ತಕ್ಕ ಉತ್ತರ ಸಿಗುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದರು.