ಕಂಗನಾ ವಿರುದ್ಧ FIR ದಾಖಲಿಸುವಂತೆ ಸಿಖ್ ಸಮುದಾಯ ಮನವಿ

ಮುಂಬೈ: ಬಾಲಿವುಡ್ ನಟಿ ಕಂಗನಾ ರನೌತ್(kangana ranaut) ಸಾಮಾಜಿಕ ಜಾಲತಾಣದಲ್ಲಿ ಸಿಖ್ ಸಮುದಾಯದ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿದ್ದಾರೆಂದು ಆರೋಪಿಸಿ ದೆಹಲಿ ಸಿಖ್ ಗುರುದ್ವಾರ ಮ್ಯಾನೇಜ್‍ಮೆಂಟ್ ಕಮಿಟಿಯು (ಡಿಎಸ್‍ಜಿಎಂಸಿ) ದೂರು ಸಲ್ಲಿಸಿ ಎಫ್‍ಐಆರ್ ದಾಖಲಿಸುವಂತೆ ಮನವಿ ಮಾಡಿದೆ.

ಶಿರೋಮಣಿ ಅಕಾಲಿದಳದ ನಾಯಕ ಮತ್ತು ಡಿಎಸ್‍ಜಿಎಂಸಿ ಅಧ್ಯಕ್ಷ ಮನ್‍ಜಿಂದರ್ ಸಿಂಗ್ ಸಿರ್ಸಾ ನೇತೃತ್ವದ ನಿಯೋಗವು ಕಂಗನಾ ವಿರುದ್ಧ ದೂರು ಸಲ್ಲಿಸಿದೆ. ಕಂಗನಾ ಅವರು ರೈತರ ಪ್ರತಿಭಟನೆಯನ್ನು ಉದ್ದೇಶಪೂರ್ವಕವಾಗಿ ಖಲಿಸ್ತಾನಿ ಆಂದೋಲನಕ್ಕೆ ಹೋಲಿಸಿದ್ದಾರೆ. ಸಿಖ್ ಸಮುದಾಯವನ್ನು ಖಲಿಸ್ತಾನಿ ಉಗ್ರರು ಎಂದು ಬಿಂಬಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ ಎಂದು ಖಾರ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ:  ನಟಿ ಕಂಗನಾರನ್ನು ಹುಚ್ಚಾಸ್ಪತ್ರೆಗೆ ಸೇರಿಸ್ಬೇಕು ಇಲ್ಲವೇ ಜೈಲಿಗೆ ಹಾಕ್ಬೇಕು: ಮಂಜಿಂದರ್‌ ಸಿಂಗ್‌

1984ರಲ್ಲಿ ಮತ್ತು ಅದಕ್ಕೂ ಮೊದಲಿನ ಸಾಮೂಹಿಕ ಹತ್ಯೆ ಮತ್ತು ನರಮೇಧವನ್ನು ನೆನಪಿಸಿಕೊಂಡಿರುವ ಕಂಗನಾ, ಇವು ಆಗಿನ ಪ್ರಧಾನಿ ಇಂದಿರಾಗಾಂಧಿ ಅವರ ವ್ಯಾವಹಾರಿಕ ಮತ್ತು ಯೋಜಿತ ನಡೆ. ಸಿಖ್ ಸಮುದಾಯದವರು ಇಂದಿರಾ ಅವರ ಷೂ ಕೆಳಗೆ ನಲುಗಿದರು ಎಂದು ಅವಹೇಳನಕಾರಿ ಭಾಷೆ ಬಳಸಿದ್ದಾರೆ ಎಂದೂ ದೂರಿನಲ್ಲಿ ಹೇಳಲಾಗಿದೆ. ಇದನ್ನೂ ಓದಿ: ಗೇಮ್ ಆಡುತ್ತಾ ಹಳಿ ಮೇಲೆ ಕುಳಿತ ಬಾಲಕರ ಮೇಲೆ ಹರಿದ ರೈಲು

Comments

Leave a Reply

Your email address will not be published. Required fields are marked *