ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪರ್ ಶರ್ಮಾ ಪರ ಧ್ವನಿ ಎತ್ತಿದ ಕಂಗನಾ ರಣಾವತ್

ಧಾಕಡ್ ಸಿನಿಮಾ ಮಕಾಡೆ ಮಲಗಿದ ನಂತರ ಕಂಗನಾ ರಣಾವತ್ ಮೌನಕ್ಕೆ ಜಾರಿದ್ದರು. ಅವರು ಯಾರ ಪರವಾಗಿ ಅಥವಾ ವಿರೋಧವಾಗಿ ಮಾತನಾಡುವುದಾಗಲಿ ಅಥವಾ ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಮಾಡುವುದಾಗಿ ಮಾಡುತ್ತಿರಲಿಲ್ಲ. ಇದೀಗ ಮತ್ತೆ ಕಂಗನಾ ಸೋಷಿಯಲ್ ಮೀಡಿಯಾದಲ್ಲಿ ಗುಡುಗಿದ್ದಾರೆ. ಅಮಾನತುಗೊಂಡಿರುವ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಪರ ಧ್ವನಿ ಎತ್ತಿದ್ದಾರೆ.

ಟಿವಿಯೊಂದರ ಚರ್ಚೆಯಲ್ಲಿ ನೂಪರ್ ಶರ್ಮಾ ಅವರು, ಪ್ರವಾದಿ ಮಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಭಾನುವಾರ ನೀಡಿದ ಈ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಬಿಜೆಪಿಯ ವಿರುದ್ಧ ಟೀಕೆಯ ಮಹಾಪೂರವೇ ಹರಿದು ಬಂದಿತ್ತು. ಪಕ್ಷಕ್ಕೆ ಆಗುವ ಹಾನಿಯನ್ನು ತಪ್ಪಿಸುವುದಕ್ಕಾಗಿ ನೂಪುರ್ ಅವರನ್ನು ವಕ್ತಾರೆ ಸ್ಥಾನದಿಂದ ವಜಾಗೊಳಿಸಲಾಗಿತ್ತು. ಈ ನಡೆಗೆ ಕಂಗನಾ ವಿರೋಧಿಸಿದ್ದಾರೆ. ಇದನ್ನೂ ಓದಿ : ಚಿರಂಜೀವಿ ನಟನೆಯ ‘ಆಚಾರ್ಯ’ ಸಿನಿಮಾ ಸೋಲು : ಹೊಣೆಹೊತ್ತು ಹಣ ಮರಳಿಸಿದ್ರಾ ನಿರ್ದೇಶಕ ಶಿವ

ನೂಪುರ್ ಅವರಿಗೆ ತಮ್ಮ ಅಭಿಪ್ರಾಯವನ್ನು ಮಂಡಿಸುವ ಹಕ್ಕಿದೆ. ನಮ್ಮದು ಪ್ರಜಾಪ್ರಭುತ್ವ. ಹಾಗಾಗಿ ಅವರಿಗೆ ಅಭಿಪ್ರಾಯವನ್ನು ವ್ಯಕ್ತಪಡಿಸುವ ಹಕ್ಕಿದೆ. ಅದನ್ನೇ ಅವರು ಮಾಡಿದ್ದಾರೆ. ಹಿಂದೂ ದೇವರ ಬಗ್ಗೆ ಅಪಮಾನಿಸಿದ ದಾಖಲೆಗಳನ್ನು ನಾನೂ ಕೊಡಬಲ್ಲೆ. ಹೀಗೆ ಡಾನ್ ಗಳನ್ನು ಬಿಟ್ ನೂಪರ್ ಅವರನ್ನು ಬೆದರಿಸುವ ಕೆಲಸವಾಗುತ್ತಿದೆ. ಇದನ್ನು ನಾನು ಖಂಡಿಸುತ್ತೇನೆ’ ಎಂದಿದ್ದಾರೆ ಕಂಗನಾ ರಣಾವತ್.

Comments

Leave a Reply

Your email address will not be published. Required fields are marked *