ಸಲ್ಮಾನ್ ಖಾನ್ ಸಿನಿಮಾದಲ್ಲಿ ಕನ್ನಡದ ನಟ ಕಿಶೋರ್?

ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ‘ಸಿಖಂದರ್’ (Sikandar) ಸಿನಿಮಾದಲ್ಲಿ ಕನ್ನಡದ ನಟ ಕಿಶೋರ್ (Kishore) ಎಂಟ್ರಿ ಕೊಟ್ಟಿದ್ದಾರೆ ಎನ್ನಲಾದ ಸುದ್ದಿಯೊಂದು ಈಗ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ:ದರ್ಶನ್‌ ಮಧ್ಯಂತರ ಜಾಮೀನು ಆದೇಶ ನಾಳೆಗೆ

ಎ.ಆರ್ ಮುರುಗದಾಸ್ ನಿರ್ದೇಶನದ ಈ ಚಿತ್ರದ ಮೂಲಕ ಕಿಶೋರ್ ನಟಿಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಚಿತ್ರೀಕರಣದಲ್ಲಿ ಕೂಡ ಅವರು ಭಾಗಿಯಾಗಿದ್ದಾರೆ ಎನ್ನಲಾಗಿದೆ. ಕಿಶೋರ್ ಈ ತಂಡವನ್ನು ಸೇರಿರುವ ಬಗ್ಗೆ ನಟನಾಗಲಿ, ‘ಸಿಖಂದರ್’ ಚಿತ್ರತಂಡವಾಗಲಿ ಅಧಿಕೃತ ಘೋಷಣೆ ಮಾಡಿಲ್ಲ. ಸದ್ಯ ಹರಿದಾಡುತ್ತಿರುವ ಸುದ್ದಿ ನಿಜನಾ? ಎಂದು ಅನೌನ್ಸ್ ಆಗುವವರೆಗೂ ಕಾಯಬೇಕಿದೆ.

ಇನ್ನೂ ಕಿಶೋರ್ ಅವರು ಯಾವುದೇ ಪಾತ್ರ ಕೊಟ್ಟರೂ ಆ ಪಾತ್ರವೇ ತಾವಾಗಿ ನಟಿಸುವ ಕಲಾವಿದ. ತೆಲುಗು, ತಮಿಳು ಚಿತ್ರಗಳಲ್ಲಿ ಈಗಾಗಲೇ ನಟಿಸಿ ಸೈ ಎನಿಸಿಕೊಂಡಿದ್ದಾರೆ. ರಜನಿಕಾಂತ್ (Rajanikanth) ಜೊತೆ ‘ಜೈಲರ್’, ‘ವೆಟ್ಟೈಯಾನ್‌’ ಸಿನಿಮಾದಲ್ಲಿ ಅವರು ನಟಿಸಿದ್ದಾರೆ. ಜೊತೆಗೆ ಕನ್ನಡದ ಸಿನಿಮಾದಲ್ಲೂ ಅವರಿಗೆ ಬೇಡಿಕೆ ಇದೆ.