ಮೆಗಾಸ್ಟಾರ್ ಚಿರಂಜೀವಿ ಚಿತ್ರ ರಿಜೆಕ್ಟ್‌ ಮಾಡಿದ ಶ್ರೀಲೀಲಾ

ನ್ನಡದ ನಟಿ ಶ್ರೀಲೀಲಾ (Sreeleela) ಸದ್ಯ ತೆಲುಗಿನಲ್ಲಿ ಬೇಡಿಕೆಯ ನಾಯಕಿಯಾಗಿದ್ದಾರೆ. ನಟನೆ ಮತ್ತು ಡ್ಯಾನ್ಸ್‌ನಲ್ಲಿ ಸೈ ಎನಿಸಿಕೊಂಡಿರುವ ನಟಿ ಈಗ ಬಾಲಿವುಡ್‌ನತ್ತ ಮುಖ ಮಾಡಿದ್ದಾರೆ. ಇದರ ನಡುವೆ ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ನಟನೆಯ ಸಿನಿಮಾವನ್ನು ‘ಕಿಸ್’ ಬೆಡಗಿ ರಿಜೆಕ್ಟ್ ಮಾಡಿರೋದು ಎಲ್ಲರ ಅಚ್ಚರಿಗೆ ಕಾರಣವಾಗಿದೆ.

‘ವಿಶ್ವಾಂಭರ’ ಸಿನಿಮಾದಲ್ಲಿ ಚಿರಂಜೀವಿ ಜೊತೆ ತ್ರಿಷಾ, ಆಶಿಕಾ ರಂಗನಾಥ್ (Ashika Ranganath) ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಬಿಗ್ ಬಜೆಟ್‌ನಲ್ಲಿ ತಯಾರಾಗುತ್ತಿರುವ ಈ ಸಿನಿಮಾದಲ್ಲಿ ಸ್ಪೆಷಲ್ ಹಾಡಿಗೆ ಹೆಜ್ಜೆ ಹಾಕಲು ಶ್ರೀಲೀಲಾರನ್ನು ಕೇಳಿದ್ರಂತೆ ಚಿತ್ರತಂಡ. ಆದರೆ ನಟಿ ನೋ ಎಂದಿದ್ದಾರೆ. ದುಬಾರಿ ಸಂಭಾವನೆ ಕೊಡುತ್ತೇವೆ ಎಂದರು ಶ್ರೀಲೀಲಾ, ಈ ಪಾಜೆಕ್ಟ್ ಅನ್ನು ತಾನು ಮಾಡಲ್ಲ ಅಂತ ರಿಜೆಕ್ಟ್ ಮಾಡಿದ್ದಾರೆ ಎನ್ನಲಾಗಿದೆ. ಹೀಗೊಂದು ಸುದ್ದಿ ಈಗ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಶ್ರೀಲೀಲಾರ ನಟನೆ ಮತ್ತು ಡ್ಯಾನ್ಸ್‌ಗೆ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಯಾವುದೇ ಪಾತ್ರ ಮತ್ತು ಡ್ಯಾನ್ಸ್ ಸ್ಟೆಪ್ಸ್ ಕೊಟ್ರು ಹೀರೋಗೆ ಠಕ್ಕರ್ ಕೊಟ್ಟು ನಟಿ ಕುಣಿಯುತ್ತಾರೆ. ಹಾಗಾಗಿ ಸಿನಿಮಾಗಳ ಜೊತೆ ಅವರಿಗೆ ಐಟಂ ಡ್ಯಾನ್ಸ್‌ಗೆ ಹೆಜ್ಜೆ ಹಾಕಲು ಕೂಡ ಅವಕಾಶಗಳು ಅರಸಿ ಬರುತ್ತಿವೆ. ಇದನ್ನೂ ಓದಿ:ರಾಷ್ಟ್ರ ಪ್ರಶಸ್ತಿ ಸಿಕ್ಕಿರುವುದಕ್ಕೆ ಹೆಮ್ಮೆ ಇದೆ- ನಿತ್ಯಾ ಮೆನನ್ ಫಸ್ಟ್ ರಿಯಾಕ್ಷನ್

ಅಂದಹಾಗೆ, ಬಾಲಿವುಡ್‌ನಲ್ಲಿ ಕಿಯಾರಾ ಪತಿ ಸಿದ್ಧಾರ್ಥ್ ಮಲ್ಹೋತ್ರಾಗೆ (Siddarth Malhotra) ಹೀರೋಯಿನ್ ಆಗಿ ಶ್ರೀಲೀಲಾ ಆಯ್ಕೆಯಾಗಿದ್ದಾರೆ. ಅಕ್ಟೋಬರ್‌ನಿಂದ ಶೂಟಿಂಗ್ ಶುರುವಾಗಲಿದೆ. ಇದರೊಂದಿಗೆ ನಿತಿನ್ ಜೊತೆ ‘ರಾಬಿನ್‌ಹುಡ್’ ಸಿನಿಮಾ, ಪವನ್ ಕಲ್ಯಾಣ್ ಜೊತೆಗಿನ ಚಿತ್ರ ಸೇರಿದಂತೆ ಹಲವು ಪ್ರಾಜೆಕ್ಟ್‌ಗಳಿವೆ.