ಆರ್‌ಸಿಬಿ ಗೆಲುವಿಗಾಗಿ ರಕ್ತದಾನ ಮಾಡಿದ ಕಿರುತೆರೆ ನಟಿ ರಜಿನಿ

ಬೆಂಗಳೂರು: 18ನೇ ಆವೃತ್ತಿಯ ಐಪಿಎಲ್‌ (IPL 2025) ಕೊನೇ ಹಂತಕ್ಕೆ ಬಂದು ನಿಂತಿದೆ. ಇಂದು ಪಂಜಾಬ್‌ ಕಿಂಗ್ಸ್‌ vs ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB vs PBKS) ತಂಡದ ಫೈನಲ್‌ಪಂದ್ಯಕ್ಕೆ ಇಲ್ಲಿ ನರೇಂದ್ರ ಮೋದಿ ಕ್ರೀಡಾಂಗಣ ಸಾಕ್ಷಿಯಾಗಲಿದೆ. ದಶಕಗಳಿಂದ ಚೊಚ್ಚಲ ಐಪಿಎಲ್‌ ಟ್ರೋಫಿಗಾಗಿ ಕಾದಿರುವ ಬೆಂಗಳೂರು ಮತ್ತು ಪಂಜಾಬ್‌ ತಂಡಕ್ಕೆ ವಿರಾಟ್‌ ಕೊಹ್ಲಿ (Virat Kohli) ಮತ್ತು ಶ್ರೇಯಸ್‌ ಅಯ್ಯರ್‌ ಇಬ್ಬರೂ ಪ್ರಶಸ್ತಿ ಗೆದ್ದುಕೊಡುವ ಉತ್ಸಾಹದಲ್ಲಿ ಎದುರಾಗುತ್ತಿದ್ದಾರೆ. 18 ವರ್ಷಗಳ ಪ್ರಶಸ್ತಿ ಬರ ನೀಗಿಸಿಕೊಳ್ಳುವ ಕಾತರದಲ್ಲಿವೆ ಎರಡೂ ತಂಡಗಳೂ ಇವೆ.

ಆದ್ರೆ ಗೆಲ್ಲುವ ಫೇವರೆಟ್‌ ಆಗಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಅಭಿಮಾನಿಗಳು (RCB Fans) ಗಣ್ಯರ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಈ ನಡುವೆ ಕಿರುತೆರೆಯ ಖ್ಯಾತ ನಟಿ ರಜಿನಿ ಆರ್‌ಸಿಬಿ ಗೆಲುವಿಗಾಗಿ ರಕ್ತದಾನ ಮಾಡಿ ಗಮನ ಸೆಳೆದಿದ್ದಾರೆ. ಇದನ್ನೂ ಓದಿ: ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್ – ಐಪಿಎಲ್ ಫೈನಲ್‌ನಲ್ಲಿ ಆಡಲಿದ್ದಾರೆ ಫಿಲ್ ಸಾಲ್ಟ್

ಆರ್‌ಸಿಬಿ ಅಭಿಮಾನಿಯೂ ಆಗಿರುವ ʻಅಮೃತ ವರ್ಷಿಣಿʼ ಧಾರಾವಾಹಿ ಖ್ಯಾತಿಯ ನಟಿ ರಜನಿ, ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಗೆಲ್ಲಲೆಂದು ರಕ್ತದಾನ ಮಾಡಿದ್ದಾರೆ. ಆ ಫೋಟೋವನ್ನ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಲ್ಲೂ ಹಂಚಿಕೊಂಡಿದ್ದಾರೆ. ʻಆರ್‌ಸಿಬಿ ವಿನ್ ಆಗ್ಲಿ ಅಂತ ಬ್ಲಡ್ ಕೊಟ್ಟಿದ್ದೀವಿ, ಈ ಸಲ ಕಪ್ ನಮ್ದೇ.. ʻಜೈ ಆರ್‌ಸಿಬಿʼ ಅಂತ ತಮ್ಮ ಇನ್‌ಸ್ಟಾ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: IPL 2025 Final – ಪಂದ್ಯಕ್ಕೂ ಮುನ್ನವೇ ಮೋದಿ ಸ್ಟೇಡಿಯಂ ಹೊರಗೆ ಸಿಲಿಂಡರ್ ಬ್ಲಾಸ್ಟ್

ಇಂದು ಸಂಜೆ 7:30ಕ್ಕೆ ಪಂದ್ಯ ಶುರುವಾಗಲಿದ್ದು, ಜಿಯೋ ಸ್ಟಾರ್‌ನಲ್ಲಿ ನೇರಪ್ರಸಾರವಾಗಲಿದೆ. 2ನೇ ಅವಧಿಯಲ್ಲಿ ಇಬ್ಬನಿಯ ಪ್ರಭಾವದಿಂದಾಗಿ ಚೇಸಿಂಗ್ ಸುಲಭವಾಗುವ ಸಾಧ್ಯತೆ ಹೆಚ್ಚಿರುವುದರಿಂದ ಟಾಸ್‌ ಗೆಲುವು ನಿರ್ಣಾಯಕವಾಗಲಿದೆ. ಟಾಸ್‌ ಗೆದ್ದ ತಂಡ ಮೊದಲು ಫೀಲ್ಡಿಂಗ್‌ ಆಯ್ದುಕೊಳ್ಳುವ ಸಾಧ್ಯತೆಯೇ ಹೆಚ್ಚಾಗಿದೆ. ಇದನ್ನೂ ಓದಿ: RCB ಇಂಪ್ಯಾಕ್ಟ್ ಪ್ಲೇಯರ್ ಆಗಿ ಸಿಂಧನೂರಿನ ಮನೋಜ್ ಬಾಂಡಗೆ – ಕುಟುಂಬಸ್ಥರಿಂದ ಗೆಲುವಿನ ಶುಭಹಾರೈಕೆ

ಆರ್‌ಸಿಬಿ ಗೆಲ್ಲುವ ಫೇವರೆಟ್
ಕ್ವಾಲಿಫೈಯರ್‌-1ನೇ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ ತಂಡವನ್ನು 8 ವಿಕೆಟ್‌ಗಳಿಂದ ಮಣಿಸುವ ಮೂಲಕ ಆರ್‌ಸಿಬಿ ನೇರವಾಗಿ ಫೈನಲ್‌ ಪ್ರವೇಶಿಸಿದೆ. ಹಿಂದಿನ ಆವೃತ್ತಿಗಳಲ್ಲಿನ ನೀರಸ ಪ್ರದರ್ಶನ ಮೀರಿರುವ ಆರ್‌ಸಿಬಿ, ಈ ವರ್ಷ ಪ್ರಶಸ್ತಿ ಗೆಲ್ಲುವ ಫೇವರಿಟ್‌ ತಂಡ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಅರಂಭಿಕ ಕ್ರಮಾಂಕದಲ್ಲಿ ಕೊಹ್ಲಿ ಸ್ಥಿರ ಪ್ರದರ್ಶನ ನೀಡಿ ತಂಡಕ್ಕೆ ಭದ್ರ ಅಡಿಪಾಯ ಒದಗಿಸಿದ್ದಲ್ಲದೇ, ಈ ಬಾರಿ ಒಟ್ಟು 614 ರನ್‌ ಗಳಿಸಿದ್ದಾರೆ. ಇದನ್ನೂ ಓದಿ: ಸತತ 2ನೇ ವರ್ಷ ರಜತ್‌ Vs ಶ್ರೇಯಸ್‌ ತಂಡಗಳ ಮಧ್ಯೆ ಟಿ20 ಫೈನಲ್!‌

ಮಳೆ ಸಾಧ್ಯತೆ ಇದೆಯೇ?
ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 2ನೇ ಕ್ವಾಲಿಫೈಯರ್‌ ಪಂದ್ಯ, ಮಳೆಯಿಂದಾಗಿ 2 ಗಂಟೆ ತಡವಾಗಿ ಆರಂಭಗೊಂಡಿತ್ತು. ಫೈನಲ್‌ಗೂ ಸಾಕ್ಷಿಯಾಗಲಿರುವ ಅಹಮದಾಬಾದ್‌ನಲ್ಲಿ ಸದ್ಯದ ಮಾಹಿತಿ ಪ್ರಕಾರ ಮಂಗಳವಾರ ಮಳೆಯ ಸಾಧ್ಯತೆ ಶೇ.62ರಷ್ಟಿದೆ. ಆದರೆ, ಬೆಳಗ್ಗೆ ಅಥವಾ ಮಧ್ಯಾಹ್ನ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ರಾತ್ರಿ ವೇಳೆ ಮಳೆಯ ಸಾಧ್ಯತೆ ಶೇ.5ರಷ್ಟು ಎಂದು ಹವಾಮಾನ ವರದಿ ತಿಳಿಸಿದೆ.