ನಮ್ಮೂರ ಮಂದಾರ ಹೂವೆ, ಅಮೃತ ವರ್ಷಿಣಿ ಚಿತ್ರದ ನಿರ್ಮಾಪಕಿ ಜಯಶ್ರೀ ನಿಧನ

ಹೈದರಾಬಾದ್: ಸ್ಯಾಂಡಲ್‍ವುಡ್ ಖ್ಯಾತ ನಿರ್ಮಾಪಕಿ ಜಯಶ್ರೀ ದೇವಿ(60) ಅವರು ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಹೈದರಾಬಾದಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಜಯಶ್ರೀ ಅವರು ಬೆಳಗ್ಗೆ ನಿಧನರಾಗಿದ್ದಾರೆ. ಜಯಶ್ರೀ ಅವರ ಮೃತದೇಹವನ್ನು ಬೆಂಗಳೂರಿಗೆ ತಂದು ಇಲ್ಲಿಯೇ ಅವರ ಅಂತ್ಯ ಸಂಸ್ಕಾರ ನಡೆಸಲು ಕುಟುಂಬದವರು ನಿರ್ಧರಿಸಿದ್ದಾರೆ.

ಜಯಶ್ರೀ ಅವರು ಸಾಹಸಸಿಂಹ ವಿಷ್ಣುವರ್ಧನ್ ಹಾಗೂ ಕುಮಾರ್ ಗೋವಿಂದ ಅವರು ನಟಿಸಿದ ‘ಕೋಣ ಈದೈತೆ’ ಚಿತ್ರವನ್ನು ನಿರ್ದೇಶನ ಹಾಗೂ ನಿರ್ಮಿಸುವುದರ ಮೂಲಕ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟಿದ್ದರು.

ಜಯಶ್ರೀ ಅವರು ಭವಾನಿ, ನಮ್ಮೂರ ಮಂದಾರ ಹೂವೆ, ಅಮೃತವರ್ಷಿಣಿ, ಶ್ರೀ ಮಂಜುನಾಥ, ನಿಶ್ಯಬ್ಧ ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಇತ್ತೀಚೆಗೆ ತೆರೆ ಕಂಡ ರಿಯಲ್‍ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ಅಭಿನಯದ `ಮುಕುಂದ -ಮುರಾರಿ’ ಸಿನಿಮಾಗೆ ಕಾರ್ಯಕಾರಿ ನಿರ್ಮಾಪಕಿಯಾಗಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *