– ಸಿನಿಮಾ ವೀಕ್ಷಣೆಗೆ ಇಡೀ ಥಿಯೇಟರ್ ಬುಕ್ ಮಾಡಿರೋ ಮಾಜಿ ಸಂಸದ ಮತ್ತೊಂದು ಪೋಸ್ಟ್
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಚಾಪ್ಟರ್ 1 (Kantara Chapter 1) ಸಿನಿಮಾ ವೀಕ್ಷಣೆಗೆ ಇಡೀ ಥಿಯೇಟರ್ ಬುಕ್ ಮಾಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha), ಟಿಕೆಟ್ ಸಿಗದ ಕಾರ್ಯಕರ್ತರಿಗೆ ಸೋಮವಾರ ವ್ಯವಸ್ಥೆ ಮಾಡಿಕೊಡುತ್ತೇನೆ ಎಂದು ತಿಳಿಸಿದ್ದಾರೆ.
‘ಭಾನುವಾರ ಸಂಜೆ 4 ಗಂಟೆಗೆ ಕಾರ್ಯಕರ್ತರೆಲ್ಲ ಸೇರಿ ಕಾಂತಾರ-2 ನೋಡೋಣ, ಡಿಆರ್‌ಸಿಯಲ್ಲಿ ಫುಲ್ ಸ್ಕ್ರೀನ್ ಬುಕ್ ಮಾಡಿದ್ದೇನೆ’ ಎಂದು ಎಕ್ಸ್ ಖಾತೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಶುಕ್ರವಾರ ಪೋಸ್ಟ್ ಹಂಚಿಕೊಂಡಿದ್ದರು. 197 ಟಿಕೆಟ್‌ಗೆ 68,920 ರೂ. ಪಾವತಿಸಿ ಥಿಯೇಟರ್ ಬುಕ್ ಮಾಡಿರುವ ರಶೀದಿಯನ್ನೂ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಇದನ್ನೂ ಓದಿ: ಕಾಂತಾರ ಸಿನಿಮಾಕ್ಕಾಗಿ ಇಡೀ ಥಿಯೇಟರ್ ಬುಕ್ ಮಾಡಿದ ಪ್ರತಾಪ್ ಸಿಂಹ
ಇವತ್ತು ಟಿಕೆಟ್ ಸಿಗದ ಕಾರ್ಯಕರ್ತರಿಗೆ ಸೋಮವಾರ ವ್ಯವಸ್ಥೆ ಮಾಡಿಕೊಡುತ್ತೇನೆ. pic.twitter.com/knpYNiP89z
— Prathap Simha (@mepratap) October 4, 2025
ಈಗ ಮತ್ತೊಂದು ಪೋಸ್ಟ್ ಹಾಕಿದ್ದು, ಟಿಕೆಟ್ ಸಿಗದ ಕಾರ್ಯಕರ್ತರಿಗೆ ಸೋಮವಾರ ವ್ಯವಸ್ಥೆ ಮಾಡಿಕೊಡುತ್ತೇನೆಂದು ತಿಳಿಸಿದ್ದಾರೆ. ಇದರಿಂದ ಮತ್ತಷ್ಟು ಕಾರ್ಯಕರ್ತರಿಗೆ ಸಿನಿಮಾ ನೋಡುವ ಅವಕಾಶ ಸಿಕ್ಕಿದೆ.
ಕಾಂತಾರ ಚಾಪ್ಟರ್ 1 ಸಿನಿಮಾ ವಿಶ್ವಾದ್ಯಂತ ಅ.2 ರಂದು ರಿಲೀಸ್ ಆಗಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕನ್ನಡ, ತೆಲುಗು, ತಮಿಳು ಸೇರಿದಂತೆ ಹಲವು ಭಾಷೆಗಳಲ್ಲಿ ಸಿನಿಮಾ ತೆರೆ ಕಂಡಿದೆ. ಸಿನಿರಂಗದ ಸ್ಟಾರ್ ಕಲಾವಿದರು, ನಿರ್ದೇಶಕರು, ರಾಜಕೀಯ ಗಣ್ಯರು ಸಿನಿಮಾವನ್ನು ಮೆಚ್ಚಿ ಕೊಂಡಾಡಿದ್ದಾರೆ.
ಕಾಂತಾರ ಚಾಪ್ಟರ್ 1 ತೆರೆ ಕಂಡ ಎರಡೇ ದಿನಕ್ಕೆ ಬರೋಬ್ಬರಿ 100 ಕೋಟಿ ಕ್ಲಬ್ ಸೇರಿದೆ. ಎಲ್ಲೆಡೆ ಥಿಯೇಟರ್‌ಗಳು ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದ್ದು, ಪ್ರೇಕ್ಷಕರು ಸಿನಿಮಾವನ್ನು ಹಾಡಿಹೊಗಳಿದ್ದಾರೆ. ಇದನ್ನೂ ಓದಿ: ಮೊದಲ ದಿನವೇ ಬುಕ್‌ಮೈಶೋದಲ್ಲಿ ದಾಖಲೆ ಬರೆದ ಕಾಂತಾರ
