ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಬದಲಾವಣೆ

ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಬದಲಾವಣೆ ಮಾಡಲಾಗಿದೆ.

ಈ ಮೊದಲು ಏಪ್ರಿಲ್ 16 ರಿಂದ ಮೇ 6 ರ ವರೆಗೆ ಪರೀಕ್ಷೆಗೆ ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ ಜೆಇಇ ಪರೀಕ್ಷೆಗಳು ಈ ದಿನಾಂಕದಲ್ಲಿ ಇರುವ ಕಾರಣ ಪಿಯುಸಿ ಬೋರ್ಡ್ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ ಬದಲಾವಣೆ ಮಾಡಿದೆ.

ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಏಪ್ರಿಲ್ 22 ರಿಂದ ಪರೀಕ್ಷೆ ಪ್ರಾರಂಭ ಆಗಲಿದ್ದು, ಮೇ 11ಕ್ಕೆ ಪರೀಕ್ಷೆಗಳು ಮುಕ್ತಾಯ ಅಗಲಿವೆ. ಪರಿಷ್ಕೃತ ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಇದನ್ನೂ ಓದಿ: ರಷ್ಯಾ- ಉಕ್ರೇನ್‌ ಯುದ್ಧ: ಕಚ್ಚಾ ತೈಲ ಬೆಲೆ ಭಾರೀ ಏರಿಕೆ

ಪರಿಷ್ಕೃತ ವೇಳಾಪಟ್ಟಿ
ಏಪ್ರಿಲ್ 22-ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ.
ಏಪ್ರಿಲ್ 23- ಹಿಂದಿ.
ಏಪ್ರಿಲ್ 25- ಅರ್ಥಶಾಸ್ತ್ರ
ಏಪ್ರಿಲ್ 26- ರಸಾಯನಶಾಸ್ತ್ರ ಹಿಂದುಸ್ಥಾನಿ ಸಂಗೀತ, ಮನಃಶಾಸ್ತ್ರ

ಏಪ್ರಿಲ್ 27- ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಏಪ್ರಿಲ್ 28- ಕನ್ನಡ, ಅರೇಬಿಕ್
ಏಪ್ರಿಲ್ 30- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮೇ 2- ಭೂಗೋಳಶಾಸ್ತ್ರ, ಜೀವಶಾಸ್ತ್ರ

ಮೇ 4- ಇಂಗ್ಲಿಷ್
ಮೇ 5- ಮಾಹಿತಿ ತಂತ್ರಜ್ಞಾನ, ರೀಟೈಲ್, ಹೆಲ್ತ್ ಕೇರ್, ಆಟೋಮೊಬೈಲ್, ಬ್ಯೂಟಿ ಅಂಡ್‌ ವೆಲ್ ನೆಸ್
ಮೇ 6- ಗಣಿತಶಾಸ್ತ್ರ, ಶಿಕ್ಷಣ ಶಾಸ್ತ್ರ, ಮೂಲ ಗಣಿತ
ಮೇ 7- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ

ಮೇ 9- ಇತಿಹಾಸ, ಭೌತಶಾಸ್ತ್ರ
ಮೇ 11- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ಇದನ್ನೂ ಓದಿ: ಭಾರತೀಯರನ್ನು ಒದೆಯುತ್ತಿದ್ದಾರೆ – ದುಃಸ್ವಪ್ನವಾಯ್ತು ಉಕ್ರೇನ್‍ನಿಂದ ಸ್ಥಳಾಂತರಿಸುವ ಆದೇಶ

Comments

Leave a Reply

Your email address will not be published. Required fields are marked *