ವಿಧಾನಸಭೆ ಚುನಾವಣೆ – ವರ್ಷಕ್ಕೂ ಮುನ್ನ ಬಳ್ಳಾರಿ ಟಿಕೆಟ್‍ಗಾಗಿ ಲಾಬಿ ಶುರು

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ‌ಕಾಂಗ್ರೆಸ್‌ ಪಕ್ಷದಲ್ಲಿ ಟಿಕೆಟ್‍ಗಾಗಿ ಲಾಬಿ ಶುರುವಾಗಿದ್ದು, ಬಳ್ಳಾರಿ ವಿಧಾನಸಭೆ ಕ್ಷೇತ್ರದ ಟಿಕೆಟ್ ಪಡೆಯಲು ಕಸರತ್ತು ಆರಂಭವಾಗಿದೆ.

ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ ತಮಗೆ ಟಿಕೆಟ್ ನೀಡುವಂತೆ ಕುಡುಚಿ ಶ್ರೀನಿವಾಸ್, ಕಾಂಗ್ರೆಸ್‌ನ ಹಿರಿಯ ನಾಯಕರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ. ಇಂದು ದೆಹಲಿಯಲ್ಲಿ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಭೇಟಿಯಾಗಿ ಟಿಕೆಟ್ ನೀಡುವಂತೆ ಶ್ರೀನಿವಾಸ್ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಹೆಡ್‌ಫೋನ್ ತೆಗೆದ ಯಡಿಯೂರಪ್ಪ – ಸಿದ್ದುಗೆ ಶಾಕ್!

ಬಳ್ಳಾರಿಯಲ್ಲಿ ಕಾಂಗ್ರೆಸ್‍ನಿಂದ ಸ್ಪರ್ಧಿಸಲು ಅನಿಲ್ ಲಾಡ್ ಕೂಡಾ ಪ್ರಯತ್ನ ನಡೆಸುತ್ತಿದ್ದು ಕ್ಷೇತ್ರದ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಆದರೆ ಅನಿಲ್ ಲಾಡ್ ಬದಲು ತಮಗೆ ಟಿಕೆಟ್ ನೀಡಿದರೇ ತಾವು ಈಗಿನಿಂದಲೇ ಕೆಲಸ ಆರಂಭಿಸಲಿದ್ದು ಗೆಲವು ಖಚಿತ ಎಂದು ಶ್ರೀನಿವಾಸ್ ಹೈಕಮಾಂಡ್ ನಾಯಕರ ಮುಂದೆ ಹೇಳಿಕೊಂಡಿದ್ದಾರೆ.

ಜೆಡಿಎಸ್ ಜಿಲ್ಲಾಧ್ಯಕ್ಷರಾಗಿದ್ದ ಕುಡುಚಿ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಯಾಗಿದ್ದು ಟಿಕೆಟ್‍ಗಾಗಿ ದೆಹಲಿಯಲ್ಲಿ ಭಾರಿ ಪ್ರಯತ್ನ ಮಾಡುತ್ತಿದ್ದಾರೆ. ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಭೇಟಿಗೂ ಪ್ರಯತ್ನಿಸುತ್ತಿದ್ದಾರೆ. ಇದನ್ನೂ ಓದಿ: ಜೇಮ್ಸ್ ಚಿತ್ರವನ್ನೂ ಯಾವುದೇ ಕಾರಣಕ್ಕೂ ತೆಗೆಯಬಾರದು: ಡಿಕೆಶಿ

Comments

Leave a Reply

Your email address will not be published. Required fields are marked *