ಸಿಎಂ ಪಟ್ಟಕ್ಕೆ ಸಿದ್ದು ಪಟ್ಟು – ದೆಹಲಿಯಲ್ಲಿ ಬೆಂಬಲಿಗರ ಜೊತೆ ಬಲ ಪ್ರದರ್ಶನ

ನವದೆಹಲಿ: ಮುಖ್ಯಮಂತ್ರಿ ಪಟ್ಟಕ್ಕೆ ಪಟ್ಟು ಹಿಡಿದಿರುವ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ದೆಹಲಿಯಲ್ಲಿ ಬೆಂಬಲಿಗರ ಜೊತೆ ಬಲ ಪ್ರದರ್ಶನ ಮಾಡಿದ್ದಾರೆ.

ಸೋಮವಾರ ತಮ್ಮ ಬೆಂಬಲಿಗರ ಜೊತೆ ದೆಹಲಿಗೆ ಬಂದಿರುವ ಸಿದ್ದರಾಮಯ್ಯ ರಾಜಕೀಯ ಒತ್ತಡದ ಮಧ್ಯೆ ತಮ್ಮ ಆಪ್ತ ಶಾಸಕರ ಜೊತೆ ರಾತ್ರಿ ಡಿನ್ನರ್‌ ಮಾಡಿದ್ದಾರೆ. ಎಂ.ಬಿ.ಪಾಟೀಲ್, ಜಮೀರ್, ಬೈರತಿ ಸುರೇಶ್, ಅನಿಲ್ ಚಿಕ್ಕಮಾಧು, ಕೆ.ಜೆ.ಜಾರ್ಜ್, ಪುತ್ರ ಯತೀಂದ್ರ ಸಾಥ್ ನೀಡಿದ್ದಾರೆ.

 

ಈ ವೇಳೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಿದ್ದರಾಮಯ್ಯ ಕಾದು ನೋಡಿ ಎಂದಷ್ಟೇ ಹೇಳಿದ್ದಾರೆ. ಇದನ್ನೂ ಓದಿ: ಹೈಕಮಾಂಡ್ ಅಂಗಳದಲ್ಲಿ ಸಿಎಂ ಚೆಂಡು – ಸಿದ್ದು ಅಥವಾ ಡಿಕೆಶಿ ಪರ ಹೆಚ್ಚು ಶಾಸಕರಿದ್ದರೆ ಏನಾಗಬಹುದು?

ಹಿಮಾಚಲ ಪ್ರದೇಶದ ಪ್ರವಾಸಕ್ಕೆ ತೆರಳಿದ ಸೋನಿಯಾ ಗಾಂಧಿ (Sonia Gandhi) ಇಂದು ದೆಹಲಿ ಆಗಮಿಸಲಿದ್ದಾರೆ. ಇಂದು ಡಿಕೆ ಶಿವಕುಮಾರ್‌ (DK Shivakumar ) ಮತ್ತು ಸಿದ್ದರಾಮಯ್ಯ ಸಮ್ಮುಖದಲ್ಲೇ ಖರ್ಗೆ ನಿವಾಸದಲ್ಲೇ ಬ್ಯಾಲೆಟ್‌ ಬಾಕ್ಸ್‌ ತೆರೆಯಲಾಗುತ್ತದೆ. ಶಾಸಕರು ಯಾರಿಗೆ ಹೆಚ್ಚು ಒಲವು ವ್ಯಕ್ತಪಡಿಸಿದ್ದಾರೋ ಅವರಿಗೆ ಸಿಎಂ ಪಟ್ಟ ಸಿಗುವ ಸಾಧ್ಯತೆಯಿದೆ. ಇದಾದ ಬಳಿಕ ಇಬ್ಬರ ಜೊತೆ ಸಂಧಾನ ಸಭೆ ನಡೆದು ಸಿಎಂ ಯಾರಾಗಬೇಕು ಎಂಬ ನಿರ್ಧಾರ ಅಂತಿಮವಾಗಲಿದೆ.