ಉಕ್ರೇನ್‍ನಲ್ಲಿ ಸಿಲುಕಿರುವ ಕನ್ನಡಿಗರ ಜೊತೆ ಮಾತನಾಡಿ ಧೈರ್ಯ ತುಂಬಿದ ಬೊಮ್ಮಾಯಿ

ಬೆಂಗಳೂರು: ಉಕ್ರೇನ್‍ನಲ್ಲಿ ಸಂಕಷ್ಟಕ್ಕೆ ಸಿಲುಕಿದ ವೈದ್ಯಕೀಯ ವಿದ್ಯಾರ್ಥಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ದೂರವಾಣಿ ಮೂಲಕ ಮಾತನಾಡಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿದರು.

ಬೆಂಗಳೂರು ಮೂಲದ ವಿದ್ಯಾರ್ಥಿ ಗಗನ್ ಗೌಡ ಸೇರಿದಂತೆ ಇತರೆ ವಿದ್ಯಾರ್ಥಿಗಳ ಜೊತೆ ಸಿಎಂ ಮಾತನಾಡಿದರು. ಉಕ್ರೇನ್‍ನಲ್ಲಿ ತಮ್ಮ ಪರಿಸ್ಥಿತಿಯನ್ನು ವಿವರಿಸಿದ ವಿದ್ಯಾರ್ಥಿಗಳು, ಖಾರ್ಕಿವ್‍ನಿಂದ 30ಕಿಮೀ ದೂರದ ಪ್ರದೇಶಕ್ಕೆ ನಾವು ನಡೆದುಕೊಂಡು ಬಂದಿದ್ದೇವೆ ಸದ್ಯಕ್ಕೆ ನಾವು ಸುರಕ್ಷಿತವಾಗಿ ಇದ್ದೇವೆ ಎಂದು ಮುಖ್ಯ ಮಂತ್ರಿಗಳಿಗೆ ತಿಳಿಸಿದರು. ಇದನ್ನೂ ಓದಿ: ತಮಿಳುನಾಡಿನ ವಿದ್ಯಾರ್ಥಿಗಳ ರಕ್ಷಣೆಗಾಗಿ ವಿದೇಶಕ್ಕೆ ತೆರಳಲು ಸಿದ್ಧರಾದ ಮೂವರು ಎಂಪಿಗಳು

ವಿದ್ಯಾರ್ಥಿಗಳಿಗೆ ಧೈರ್ಯ ಹೇಳಿದ ಸಿಎಂ, ಈ ಸಂಬಂಧ ವಿದೇಶಾಂಗ ಸಚಿವಾಲಯದ ಅಧಿಕಾರಿಗಳ ಜೊತೆ ಕರ್ನಾಟಕ ಸರ್ಕಾರ ನಿರಂತರವಾಗಿ ಸಂಪರ್ಕದಲ್ಲಿದೆ. ನಿಮಗೆ ಎಲ್ಲ ರೀತಿಯ ಸಹಕಾರ ಸಿಗುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ. ನಿಮ್ಮನ್ನು ಅಲ್ಲಿಂದ ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಸರ್ವ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಇದನ್ನೂ ಓದಿ: ರಷ್ಯಾ ಆಯ್ತು ಭಾರತದ ಮೇಲೆ ನಿರ್ಬಂಧ ಹೇರುತ್ತಾ ಅಮೆರಿಕ?

ರಾಜ್ಯದ 200 ವಿದ್ಯಾರ್ಥಿಗಳು ಖಾರ್ಕಿವ್‍ನಲ್ಲಿ ಇದ್ದಾರೆ. ಈಗಾಗಲೇ ರಾಜ್ಯದ ಸುಮಾರು 40ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ವಾಪಸ್ ಕರೆದುಕೊಂಡು ಬರಲಾಗಿದೆ. ಉಳಿದ ಎಲ್ಲಾ ಕನ್ನಡಿಗರನ್ನು ಸುರಕ್ಷಿತವಾಗಿ ಕರೆದುಕೊಂಡು ಬರಲು ಅಗತ್ಯ ಕ್ರಮವಹಿಸುವಂತೆ ಮುಖ್ಯಮಂತ್ರಿಗಳು ನೋಡಲ್ ಅಧಿಕಾರಿಗೆ ಸೂಚನೆ ನೀಡಿದರು. ಅಲ್ಲದೆ ವಿದೇಶಾಂಗ ಸಚಿವರ ಜೊತೆ ನಿರಂತರವಾಗಿ ಮುಖ್ಯಮಂತ್ರಿಗಳು ಸಂಪರ್ಕದಲ್ಲಿ ಇದ್ದು ಆದಷ್ಟು ಬೇಗ ಕನ್ನಡಿಗರ ರಕ್ಷಣೆ ಮಾಡೋದಾಗಿ ವಿದ್ಯಾರ್ಥಿಗಳಿಗೆ ಭರವಸೆಯ ಮಾತುಗಳನ್ನಾಡಿದರು. ಇದನ್ನೂ ಓದಿ: ಉಕ್ರೇನ್‍ನಲ್ಲಿ ಭಾರತೀಯರು ಸಿಲುಕಿರುವಾಗ, ಮೋದಿ ಯುಪಿ ಚುನಾವಣಾ ಸಭೆಗಳಲ್ಲಿ ನಿರತರಾಗಿದ್ದಾರೆ: ಮಮತಾ ಬ್ಯಾನರ್ಜಿ ಕಿಡಿ

Comments

Leave a Reply

Your email address will not be published. Required fields are marked *