ಸಿಎಂ, ಮಹದೇವಪ್ಪ ಪುತ್ರಗೆ ಟಿಕೆಟ್ ಭಾಗ್ಯ: ಎಲ್ಲಿ ಕಣಕ್ಕೆ ಇಳಿಯಲಿದ್ದಾರೆ ಗೊತ್ತಾ?

ಮೈಸೂರು: ಮುಂದೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರರಾದ ಯತೀಂದ್ರ ಹಾಗೂ ಸಚಿವ ಹೆಚ್‍ಸಿ ಮಹದೇವಪ್ಪ ಪುತ್ರ ಸುನೀಲ್ ಬೋಸ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಿದೆ.

ಮುಂದಿನ ಚುನಾವಣೆಯಲ್ಲಿ ಯತೀಂದ್ರ ಅವರಿಗೆ ವರುಣಾ ಕ್ಷೇತ್ರದಿಂದ ಮತ್ತು ಸುನೀಲ್ ಬೋಸ್ ಗೆ ಟಿ.ನರಸೀಪುರದಿಂದ ಟಿಕೆಟ್ ನೀಡಲಾಗುವುದು ಎಂದು ಲೋಕೋಪಯೋಗಿ ಸಚಿವ ಮಹಾದೇವಪ್ಪ ಹೇಳಿದ್ದಾರೆ.

ಟಿ.ನರಸೀಪುರದ ಸ್ಥಳೀಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಮತ್ತು ಸಿದ್ದರಾಮಯ್ಯ ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಲು ಮುಕ್ತ ಅವಕಾಶ ಇದೆ. ಈ ಕಾರಣದಿಂದ ಈ ಎರಡು ಕ್ಷೇತ್ರದಲ್ಲಿ ಯುವಕರಿಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

Comments

Leave a Reply

Your email address will not be published. Required fields are marked *