ಬೆಂಗಳೂರು: ವರುಣಾ (Varuna) ಕ್ಷೇತ್ರಕ್ಕೆ ಮತ್ತೆ ಮತ ಪ್ರಚಾರಕ್ಕೆ ಸಿದ್ದರಾಮಯ್ಯ (Siddaramaiah) ಆಗಮಿಸಿದ್ದಕ್ಕೆ ಮೈಸೂರು ಸಂಸದ ಪ್ರತಾಪ್ ಸಿಂಹ (Pratap Simha) ಕಾಲೆಳೆದಿದ್ದಾರೆ.
ವರುಣಾದಲ್ಲೇ ಚುನಾವಣೆ ನಿಲ್ಲುವುದಾಗಿಯೂ ಹಾಗೂ ನಾಮಪತ್ರ ಸಲ್ಲಿಸಲು ಮಾತ್ರ ಬರುತ್ತೇನೆ ಎಂದು ಹೇಳಿಹೋಗಿದ್ದ ಸಿದ್ದರಾಮಯ್ಯನವರು ಸೋಮಣ್ಣನವರ ಹೆಸರು ಘೋಷಣೆಯಾಗುತ್ತಿದ್ದಂತೆಯೇ ನಾಮಪತ್ರ ಸಲ್ಲಿಸಲು 2 ದಿನ ಮೊದಲೇ ಓಡಿಬಂದರು. ಇವತ್ತು ಮತ್ತೆ ಬಂದಿದ್ದಾರೆ. ಮುಂದಿನವಾರ ಇಲ್ಲೇ ಇರುತ್ತಾರಂತೆ! ಭಯ! ಆ ಭಯ ಇರಬೇಕು ಸಿದ್ದರಾಮಯ್ಯನವರೇ ಎಂದು ಸಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ರಾಜ್ಯ ನಾಯಕರಿಗೆ ಕ್ಲಾಸ್ – ಬಂಡಾಯ ಶಮನಕ್ಕೆ ಶಾ ಮದ್ದು
ವರುಣಾದಲ್ಲೇ ಚುನಾವಣೆ ನಿಲ್ಲುವುದಾಗಿಯೂ ಹಾಗು ನಾಮಪತ್ರ ಸಲ್ಲಿಸಲಷ್ಟೇ ಬರುತ್ತೇನೆ ಎಂದು ಹೇಳಿಹೋಗಿದ್ದ ಸಿದ್ದರಾಮಯ್ಯನವರು ಸೋಮಣ್ಣನವರ ಹೆಸರು ಘೋಷಣೆಯಾಗುತ್ತಿದ್ದಂತೆಯೇ ನಾಮಪತ್ರ ಸಲ್ಲಿಸಲು 2 ದಿನ ಮೊದಲೇ ಓಡಿಬಂದರು, ಇವತ್ತು ಮತ್ತೆ ಬಂದಿದ್ದಾರೆ, ಮುಂದಿನವಾರ ಇಲ್ಲೇ ಇರುತ್ತಾರಂತೆ! ಭಯ! ಆ ಭಯ ಇರಬೇಕು ಸಿದ್ದರಾಮಯ್ಯನವರೆ! pic.twitter.com/BnIqPhy1eb
— Prathap Simha (@mepratap) April 22, 2023
ಸಿದ್ದರಾಮಯ್ಯನವರು ಇಂದು ಬೆಳಗ್ಗೆ ಬೆಂಗಳೂರಿನಿಂದ ಮೈಸೂರಿಗೆ ಹೆಲಿಕಾಪ್ಟರ್ ಮೂಲಕ ತೆರಳಿ ಬಳಿಕ ವರುಣಾ ಕ್ಷೇತ್ರದಲ್ಲಿ ಮತ ಪ್ರಚಾರ ನಡೆಸಲಿದ್ದಾರೆ. ರಾತ್ರಿ ರಸ್ತೆ ಮಾರ್ಗದ ಮೂಲಕ ಬೆಂಗಳೂರಿಗೆ ಬರಲಿದ್ದಾರೆ.
ಕಳೆದ ಬಾರಿ ಚಾಮುಂಡೇಶ್ವರಿ ಮತ್ತು ಬಾದಾಮಿಯಲ್ಲಿ ಸ್ಪರ್ಧಿಸಿದ್ದ ಸಿದ್ದರಾಮಯ್ಯ ಈ ಬಾರಿ ಪುತ್ರ ಯತೀಂದ್ರ ಸಿದ್ದರಾಮಯ್ಯನವರ ವರುಣಾ ಕ್ಷೇತ್ರದಲ್ಲಿ ನಿಂತಿದ್ದಾರೆ. ಈ ಬಾರಿ ಸಿದ್ದರಾಮಯ್ಯನವರನ್ನು ಸೋಲಿಸಲು ಬಿಜೆಪಿ ಸೋಮಣ್ಣನವರನ್ನು ಕಣಕ್ಕೆ ಇಳಿಸಿದ್ದು ಭರ್ಜರಿ ಪ್ರಚಾರದಲ್ಲಿ ತೊಡಗಿದೆ.
