ಸರ್ಕಾರಿ ನೇಮಕಾತಿ ಪರೀಕ್ಷೆಗಳ ಅಕ್ರಮ ತಡೆಯಲು ಟಫ್ ರೂಲ್ಸ್!

ಬೆಂಗಳೂರು: ಸರ್ಕಾರಿ ನೇಮಕಾತಿ ಪರೀಕ್ಷೆಗಳ ವೇಳೆ ನಡೆಯುವ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಟಫ್ ರೂಲ್ಸ್ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ.

ರಾಜ್ಯದಲ್ಲಿ ಎಲ್ಲ ಸರ್ಕಾರಿ ನೇಮಕಾತಿ ಪರೀಕ್ಷೆಗಳ ವೇಳೆ ಇನ್ಮುಂದೆ ಜಾಮರ್ ಅಳವಡಿಸಲು ಸರ್ಕಾರ ಚಿಂತನೆ ನಡೆಸಿದೆ. ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ಕರ್ಮಕಾಂಡ ಹಿನ್ನೆಲೆಯಲ್ಲಿ ಜಾಮರ್ ಅಳವಡಿಕೆಗೆ ಸರ್ಕಾರ ಮುಂದಾಗಿದೆ. ಇದನ್ನೂ ಓದಿ: ಭಾರೀ ಮಳೆಗೆ ಮುಳುಗಿದ ರಾಜಧಾನಿ – ಪೂಲ್‌ನಲ್ಲಿ ಈಜಾಡಲು ಬನ್ನಿ ಬೊಮ್ಮಾಯಿಯವರೇ ಎಂದ ಯುವಕ

VIDHAN SHOUDHA

ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಜಾಮರ್ ಅಳವಡಿಕೆ ಸಂಬಂಧ ಸರ್ಕಾರ ಮಟ್ಟದಲ್ಲಿ ಮಹತ್ವದ ಚರ್ಚೆ ನಡೆದಿದೆ. ಯಾವುದೇ ಪರೀಕ್ಷೆ ನಡೆದರೂ ಜಾಮರ್ ಕಡ್ಡಾಯ ಮಾಡುವ ಬಗ್ಗೆ ಪ್ಲ್ಯಾನ್‌ ಮಾಡುತ್ತಿದೆ. ಜಾಮರ್ ಅಳವಡಿಕೆ ಸಂಬಂಧ ಜೂನ್ ವಾರದಲ್ಲಿ ವರದಿ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

ಜಾಮರ್ ಜೊತೆಗೆ ವಿಚಕ್ಷಣಾ ದಳವನ್ನೂ ಹೆಚ್ಚಳ ಮಾಡುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಸಾಲು ಸಾಲು ಅಕ್ರಮಗಳಿಂದ ಬಿಜೆಪಿ ಸರ್ಕಾರಕ್ಕೆ ಕಪ್ಪುಚುಕ್ಕೆಯಾಗಿದ್ದು, ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಬಿಜೆಪಿ ಹೈಕಮಾಂಡ್ ಕೂಡ ಕೆಂಡಕಾರಿತ್ತು. ಪರೀಕ್ಷಾ ವ್ಯವಸ್ಥೆ ಸುಧಾರಿಸಲು ಮುಂದಾಗುವಂತೆ ಆರ್‌ಎಸ್‌ಎಸ್ ಕೂಡ ತಾಕೀತು ಮಾಡಿತ್ತು. ಇದನ್ನೂ ಓದಿ: ಬೆಂಗಳೂರಿನಲ್ಲಿ ರಣಮಳೆಗೆ ಇಬ್ಬರು ಕಾರ್ಮಿಕರು ಬಲಿ

Comments

Leave a Reply

Your email address will not be published. Required fields are marked *