ಮಾರ್ಚ್‌ ತಿಂಗಳಲ್ಲಿ ತಮಿಳುನಾಡು ಸರ್ಕಾರಕ್ಕೆ ಜಯಲಲಿತಾ ಒಡವೆ ಹಸ್ತಾಂತರ: ಕೋರ್ಟ್‌ನಿಂದ ದಿನಾಂಕ ನಿಗದಿ

ಬೆಂಗಳೂರು: ಜಪ್ತಿಯಾದ ಜಯಲಲಿತಾ (Jayalalitha) ಒಡವೆಯನ್ನು ತಮಿಳುನಾಡು ಸರ್ಕಾರಕ್ಕೆ ಹಿಂತಿರುಗಿಸಲು ಕರ್ನಾಟಕ ಹೈಕೋರ್ಟ್‌ (Karnataka High Court) ದಿನಾಂಕ ನಿಗದಿ ಮಾಡಿದೆ.

ತಮಿಳುನಾಡು (Tamil Nadu) ಮಾಜಿ ಸಿಎಂ ದಿ. ಜಯಲಲಿತಾ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ವಿಚಾರಣೆ ನಡೆಸಿದ ಹೈಕೋರ್ಟ್‌ ಈ ಆದೇಶ ಹೊರಡಿಸಿದೆ. ಮಾರ್ಚ್ 6 ಮತ್ತು 7 ರಂದು ಒಡವೆಯನ್ನು ತಮಿಳುನಾಡು ಸರ್ಕಾರಕ್ಕೆ‌ ಹಸ್ತಾಂತರಿಸಬೇಕು ಎಂದು ನ್ಯಾ. ಮೋಹನ್‌ ಸೂಚಿಸಿದ್ದಾರೆ. ಇದನ್ನೂ ಓದಿ: ಕೇಂದ್ರದ ಪ್ರಸ್ತಾವನೆ ತಿರಸ್ಕರಿಸಿದ ರೈತರು – ‘ದೆಹಲಿ ಚಲೋ’ ಮುಂದುವರಿಸುವುದಾಗಿ ಘೋಷಣೆ

ಒಡವೆ ಸ್ವೀಕರಿಸಲು ತಮಿಳುನಾಡಿನಿಂದ ಇಬ್ಬರು ಅಧಿಕಾರಿಗಳ ನೇಮಕವಾಗಬೇಕು. ತಮಿಳುನಾಡು ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ಐಜಿಪಿ ವಿಜಿಲೆನ್ಸ್ ಹಾಜರಿರಬೇಕು ಎಂದು ಹೈಕೋರ್ಟ್‌ ಸೂಚಿಸಿದೆ.‌

ಕರ್ನಾಟಕಕ್ಕೆ ಕೊಡಬೇಕಾದ‌ 5 ಕೋಟಿ ರೂ. ವ್ಯಾಜ್ಯ ಶುಲ್ಕ ಇನ್ನೂ ಪಾವತಿಯಾಗಿಲ್ಲ ಎಂದು ಕೋರ್ಟ್‌ಗೆ ಎಸ್‌ಪಿಪಿ ಕಿರಣ್ ಜವಳಿ ಮಾಹಿತಿ ನೀಡಿದರು. ಮುಂದಿನ‌ ವಿಚಾರಣೆಯನ್ನು ಹೈಕೋರ್ಟ್‌ ಮಾ.6 ಕ್ಕೆ ನಿಗದಿಪಡಿಸಿದೆ. ಇದನ್ನೂ ಓದಿ: ಕೇರಳದಲ್ಲಿ ಆನೆ ತುಳಿತಕ್ಕೆ ವ್ಯಕ್ತಿ ಬಲಿ; ಕರ್ನಾಟಕ ಸರ್ಕಾರದಿಂದ ಪರಿಹಾರ – ಈಶ್ವರ್‌ ಖಂಡ್ರೆ ಹೇಳಿದ್ದೇನು?