6 ವಾರಗಳಲ್ಲಿ ಓಲಾ, ಉಬರ್ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಸ್ಥಗಿತಕ್ಕೆ ಹೈಕೋರ್ಟ್ ಆದೇಶ

-ನಿರ್ಬಂಧಿಸದಂತೆ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್

ಬೆಂಗಳೂರು: 6 ವಾರಗಳಲ್ಲಿ ಓಲಾ, ಉಬರ್ ಬೈಕ್ (Uber) ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸುವಂತೆ ರಾಜ್ಯ ಹೈಕೋರ್ಟ್ (High Court) ಆದೇಶ ಹೊರಡಿಸಿದೆ.

2022ರಲ್ಲಿ ಮೋಟಾರ್ ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ರಾಜ್ಯ ಸರ್ಕಾರಕ್ಕೆ (State Government) ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ್ದವು. ಈ ಅರ್ಜಿಗಳ ವಿಚಾರಣೆಯ ವೇಳೆ 1988ರ ಮೋಟಾರು ವಾಹನ ಕಾಯ್ದೆ ಹಾಗೂ ಸೆಕ್ಷನ್ 93ರಡಿಯಲ್ಲಿ ಬರುವ ಮಾರ್ಗಸೂಚಿಗಳನ್ನು ಹೊರಡಿಸಿದ ನಂತರ ಅರ್ಜಿದಾರರು ಬೈಕ್ ಟ್ಯಾಕ್ಸಿ ಸೇವೆ ನೀಡಬಹುದು. ಆದರೆ ರಾಜ್ಯ ಸರ್ಕಾರ ಓಲಾ, ಉಬರ್ ಇನ್ನಿತರ ಬೈಕ್ ಟ್ಯಾಕ್ಸಿಗಳಿಗೆ ನಿಯಮ ರೂಪಿಸಿಲ್ಲ. ನಿಯಮಗಳಿಲ್ಲದೇ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಮಾಡುವಂತಿಲ್ಲ ಎಂದು ಅಭಿಪ್ರಾಯಪಟ್ಟಿದೆ.ಇದನ್ನೂ ಓದಿ:105 ಮೀಟರ್‌ ಭರ್ಜರಿ ಸಿಕ್ಸರ್‌ – ಈ ಐಪಿಎಲ್‌ನಲ್ಲಿ ಫಿಲ್‌ ಸಾಲ್ಟ್‌ ವಿಶೇಷ ಸಾಧನೆ

ಈ ಸಂಬಂಧ ಕರ್ನಾಟಕ ಸಾರಿಗೆ ಇಲಾಖೆಗೆ ಮೋಟಾರ್ ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು ನಿರ್ದೇಶನ ನೀಡಲಾಗುವುದಿಲ್ಲ. ಹೀಗಾಗಿ 3 ತಿಂಗಳಲ್ಲಿ ನಿಯಮ ರೂಪಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ. ಇನ್ನೂ 6 ವಾರಗಳ ಕಾಲಾವಕಾಶ ನೀಡಿದ್ದು, ಬಳಿಕ ಕಾರ್ಯಾಚರಣೆ ಸ್ಥಗಿತಗೊಳಿಸುವಂತೆ ನ್ಯಾ.ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ಪೀಠ ಆದೇಶ ಹೊರಡಿಸಿದೆ.

ಓಲಾ, ಉಬರ್ ಬೈಕ್ ಟ್ಯಾಕ್ಸಿ ಸೇವೆಗೆ ನಿರ್ಬಂಧ ವಿಧಿಸಿದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.ಇದನ್ನೂ ಓದಿ:ರಷ್ಯಾದಲ್ಲಿ ಕೋವಿಡ್ ಮಾದರಿ ನಿಗೂಢ ವೈರಸ್!