ಎಲೆಕ್ಟ್ರಿಕ್ ವಾಹನಗಳ ನೋಂದಣಿಯಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ

ನವದೆಹಲಿ: ಎಲೆಕ್ಟ್ರಿಕ್ ವಾಹನಗಳ ನೋಂದಣಿಗೆ ಸಂಬಂಧಿಸಿದಂತೆ ಭಾರತದಲ್ಲಿ ಉತ್ತರಪ್ರದೇಶ, ದೆಹಲಿ ಹಾಗೂ ಕರ್ನಾಟಕ ಮೊದಲ ಮೂರು ರಾಜ್ಯಗಳಾಗಿ ಹೊರಹೊಮ್ಮಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಕೇಂದ್ರ ಸರ್ಕಾರ ನಡೆಸಿದ ಸಮೀಕ್ಷೆಯಲ್ಲಿ ಭಾರತದಲ್ಲಿ ಒಟ್ಟು 8,70,141 ಎಲೆಕ್ಟ್ರಿಕ್ ವಾಹನಗಳನ್ನು ನೋಂದಾಯಿಸಲಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದರು.

ಉತ್ತರ ಪ್ರದೇಶ(255,700) ಅತಿ ಹೆಚ್ಚು ನೋಂದಾಯಿತ ಎಲೆಕ್ಟ್ರಿಕ್ ವಾಹನಗಳನ್ನು ಹೊಂದಿದ್ದು, ನಂತರದ ಸ್ಥಾನವನ್ನು ದೆಹಲಿ (125,347) ಮತ್ತು ಕರ್ನಾಟಕ (72,544) ಪಡೆದುಕೊಂಡಿದೆ. ಇನ್ನುಳಿದಂತೆ ನಾಲ್ಕು ಮತ್ತು ಐದನೇ ಸ್ಥಾನಗಳನ್ನು ಬಿಹಾರ(58,014) ಮತ್ತು ಮಹಾರಾಷ್ಟ್ರ(52,506) ಗಳಿಸಿಕೊಂಡಿದೆ.

ಈ ಬಗ್ಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಾತನಾಡಿ, ಎಲೆಕ್ಟ್ರಿಕ್ ವಾಹನಗಳ ಮೇಲಿನ ಜಿಎಸ್‌ಟಿಯನ್ನು ಶೇ.12 ರಿಂದ ಶೇ.5ಕ್ಕೆ ಇಳಿಸಲಾಗಿದೆ. ಎಲೆಕ್ಟ್ರಿಕ್ ವಾಹನಗಳ ಚಾರ್ಜರ್‌ಗಳು ಹಾಗೂ ಚಾರ್ಜಿಂಗ್ ಸ್ಟೇಷನ್‌ಗಳ ಮೇಲಿನ ಜಿಎಸ್‌ಟಿಯನ್ನು ಶೇ.18 ರಿಂದ ಶೇ 5ಕ್ಕೆ ಇಳಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಭಾರತ ಶಸ್ತ್ರಾಸ್ತ್ರ ತಯಾರಿಕೆಯಲ್ಲಿ ಆತ್ಮನಿರ್ಭರ್ ಆಗಬೇಕೆಂಬ ಹಂಬಲ ಬಿಪಿನ್ ಅವರಿಗಿತ್ತು: ಬೊಮ್ಮಾಯಿ

ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಅಳವಡಿಕೆಯನ್ನು ಉತ್ತೇಜಿಸಲು ಕೈಗಾರಿಕೆಗಳ ಸಚಿವಾಲಯವು 2015ರಲ್ಲಿ ಫಾಸ್ಟರ್ ಅಡಾಪ್ಶನ್ ಮತ್ತು ಮ್ಯಾನುಫ್ಯಾಕ್ಚರಿಂಗ್, ಎಲೆಕ್ಟ್ರಿಕ್ ವೆಹಿಕಲ್ಸ್ ಇನ್ ಇಂಡಿಯಾ ಯೋಜನೆಯನ್ನು ಜಾರಿಗೆ ತಂದಿದೆ ಎಂದು ತಿಳಿಸಿದರು. ಇದನ್ನೂ ಓದಿ: 200 ಕೋಟಿ ರೂ. ವಂಚನೆ ಪ್ರಕರಣ – ಇಡಿ ಮುಂದೆ ವಿಚಾರಣೆಗೆ ಹಾಜರಾದ ಜಾಕ್ವೆಲಿನ್

Comments

Leave a Reply

Your email address will not be published. Required fields are marked *