40 ಲಕ್ಷ ಲಂಚ – ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಪುತ್ರ

ಬೆಂಗಳೂರು: ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ (BJP MLA Madal Virupakshappa) ಪುತ್ರ ಲಂಚ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರ (Karnataka Lokayuktha Police) ಬಲೆಗೆ ಬಿದ್ದಿದ್ದಾರೆ.

ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ (BWSSB) ಮುಖ್ಯ ಅಕೌಂಟೆಂಟ್ ಪ್ರಶಾಂತ್ ಮಾಡಾಳ್‌ (Prashanth Madal) ಲೋಕಾಯಕ್ತ ಬಲೆಗೆ ಬಿದ್ದ ಅಧಿಕಾರಿ.

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (KSDL) ವಸ್ತು ಖರೀದಿ ಸಂಬಂಧ ಟೆಂಡರ್‌ ಅನುಮೋದನೆಗೆ 80 ಲಕ್ಷ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. ಗುರುವಾರ ಸಂಜೆ ಪ್ರಶಾಂತ್ ಮಾಡಲ್ 40 ಲಕ್ಷ ರೂ. ಪಡೆಯುತ್ತಿದ್ದಾಗ ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ: ಫಸ್ಟ್‌ ಟೈಂ ನಾಗಾಲ್ಯಾಂಡ್ ವಿಧಾನಸಭೆಗೆ ಮಹಿಳಾ ಶಾಸಕಿ ಎಂಟ್ರಿ

ಆರೋಪ ಏನು?
ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯಾಗಿರುವ ಪ್ರಶಾಂತ್, ನಿಯೋಜನೆ ಮೇಲೆ ಬೆಂಗಳೂರು ಜಲಮಂಡಳಿಯಲ್ಲಿ ಮುಖ್ಯ ಲೆಕ್ಕಾಧಿಕಾರಿ ಹುದ್ದೆಯಲ್ಲಿದ್ದಾರೆ. ಕೆಎಸ್‌ಡಿಎಲ್‌ಗೆ ರಾಸಾಯನಿಕ ಪೂರೈಕೆಗೆ ಆಯ್ಕೆಯಾಗಿರುವ ಗುತ್ತಿಗೆದಾರರಿಂದ 80 ಲಕ್ಷ‌ ರೂ. ಲಂಚದ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಬಂದಿದೆ. ಖಚಿತ ಮಾಹಿತಿಯ ಮೇರೆಗೆ ಪ್ರಶಾಂತ್‌ ಮಾಡಲ್‌ ಇದ್ದ ಖಾಸಗಿ ಕಚೇರಿ ಮೇಲೆ  ಪೊಲೀಸರು ದಾಳಿ ನಡೆಸಿದ್ದರು. ಮುಂದುವರಿದ ಭಾಗವಾಗಿ ಡಾಲರ್ಸ್‌ ಕಾಲೋನಿ ನಿವಾಸದಲ್ಲೂ ಲೋಕಾ ಪೊಲೀಸರು ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ. ಮಾಡಾಳ್‌ ವಿರೂಪಾಕ್ಷಪ್ಪ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಅಧ್ಯಕ್ಷರಾಗಿದ್ದಾರೆ.

Comments

Leave a Reply

Your email address will not be published. Required fields are marked *