ಬೆಂಗಳೂರು: ರಾಜ್ಯದಲ್ಲಿ ನಿನ್ನೆಗಿಂತ ಇಂದು ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗಿದ್ದು, ಆರೋಗ್ಯಾಧಿಕಾರಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ನಿನ್ನೆ 2 ಸಾವಿರಕ್ಕೂ ಹೆಚ್ಚಿದ್ದ ಕೊರೊನಾ ಸೋಂಕಿನ ಪ್ರಕರಣ ಇಂದು 1,886ಕ್ಕೆ ಇಳಿಕೆಯಾಗಿದೆ. ಓರ್ವ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಇಂದು ರಾಜ್ಯದಲ್ಲಿ 1,242 ಮಂದಿ ಕೊರೊನಾದಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ 39,55,018 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಇಂದು 32,379 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರೊಂದಿಗೆ ಇಲ್ಲಿಯವರೆಗೆ 6,77,68,601 ಮಂದಿಯನ್ನು ಟೆಸ್ಟ್ ಮಾಡಲಾಗಿದೆ.

ಕೋವಿಡ್‌ನಿಂದ ಇಂದು ಒಂದೇ ಒಂದು ಮರಣ ಪ್ರಕರಣ ದಾಖಲಾಗಿದ್ದು, ಇದುವೆರೆಗೆ ಒಟ್ಟು 40,102 ಮಂದಿ ಜೀವ ಕಳೆದುಕೊಂಡಿದ್ದಾರೆ. ಇಂದಿನ ಪಾಸಿಟಿವಿಟಿ ದರ ಶೇ.5.82 ಇದೆ. 10,509 ಸಕ್ರಿಯ ಪ್ರಕರಣಗಳಿವೆ. ಇಂದು 32,379 ಮಂದಿಯನ್ನು (23,348 ರ‍್ಯಾಪಿಡ್ ಆಂಟಿಜನ್, 9,031 ಆರ್‌ಟಿ-ಪಿಸಿಆರ್) ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಅಲ್ಲದೇ ಇಂದು 92,376 ಮಂದಿ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು ನಗರದಲ್ಲೇ 1,342 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು ಗ್ರಾಮಾಂತರದಲ್ಲಿ 60, ಬಾಗಲಕೋಟೆ 8, ಬಳ್ಳಾರಿ 28, ಬೆಳಗಾವಿ 34, ಬೀದರ್ 11, ಚಾಮರಾಜನಗರ 14, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 15, ಚಿತ್ರದುರ್ಗ 3, ದಕ್ಷಿಣ ಕನ್ನಡ 13, ದಾವಣಗೆರೆ 8, ಧಾರವಾಡ 40, ಗದಗ 5, ಹಾಸನ 40, ಹಾವೇರಿ 5, ಕಲಬುರಗಿ 30, ಕೊಡಗು 32, ಕೋಲಾರ 21, ಕೊಪ್ಪಳ 5, ಮಂಡ್ಯ 19, ಮೈಸೂರು 58, ರಾಯಚೂರು 13, ರಾಮನಗರ 3, ಶಿವಮೊಗ್ಗ 12, ತುಮಕೂರು 29, ಉಡುಪಿ 15, ಉತ್ತರ ಕನ್ನಡ 17, ವಿಜಯಪುರ 3 ಹಾಗೂ ಯಾದಗಿರಿಯಲ್ಲಿ 1 ಪ್ರಕರಣ ವರದಿಯಾಗಿರುವುದಾಗಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Leave a Reply