ರಾಜ್ಯದ 58 ಪುರಸಭೆ, 57 ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ ಇಂದು

ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ಡಿ.27ರಂದು ನಡೆದಿದ್ದ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ರಾಜ್ಯದ 58 ಪುರಸಭೆ, 57 ಗ್ರಾಮ ಪಂಚಾಯಿತಿಗಳಿಗೆ ನಡೆದಿದ್ದ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ.

ಬೆಳಗ್ಗೆ 8 ರಿಂದಲೇ ಆಯಾ ಕೇಂದ್ರಗಳಲ್ಲಿ ಮತ ಎಣಿಕೆ ಆರಂಭವಾಗಿದೆ. 5 ನಗರಸಭೆ, 19 ಪುರಸಭೆ, 34 ಪಟ್ಟಣ ಪಂಚಾಯಿತಿ ಫಲಿತಾಂಶ ಹೊರ ಬೀಳಲಿದೆ. ಒಟ್ಟು 1,185 ವಾರ್ಡ್‌ಗಳ 4,961 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ 6 ಭಯೋತ್ಪಾದಕರ ಹತ್ಯೆ

ಚಿಕ್ಕಮಗಳೂರು, ತುಮಕೂರಿನ ಶಿರಾ, ಗದಗ ಜಿಲ್ಲೆಯ ಬೆಟಗೇರಿ, ಬೆಂಗಳೂರು ಜಿಲ್ಲೆ ಹೆಬ್ಬಗೋಡಿ, ಬಳ್ಳಾರಿ ಜಿಲ್ಲೆಯ ಹೊಸಪೇಟೆ ನಗರಸಭೆಗೆ ಚುನಾವಣೆ ನಡೆದಿತ್ತು. ಇಂದು ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಬೆಳಗಾವಿಯ 5 ಪುರಸಭೆ, 11 ಪಟ್ಟಣ ಪಂಚಾಯಿತಿ, ಅಥಣಿ, ಹಾರೋಗೇರಿ, ಮುನವಳ್ಳೀ, ಉಗಾರಖುರ್ದ್‌ ಹಾಗೂ ಗ್ರಾಮ ಪಂಚಾಯಿತಿಗಳ 470 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಇಂದು ಅಭ್ಯರ್ಥಿಗಳು ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ.

ಹಾವೇರಿ ಜಿಲ್ಲೆಯ ಬಂಕಾಪುರ ಪುರಸಭೆ, ಗುತ್ತಲ ಪಟ್ಟಣ ಪಂಚಾಯಿತಿ ಮತ ಎಣಿಕೆ ನಡೆಯುತ್ತಿದೆ. ಬಂಕಾಪುರ ಪುರಸಭೆ 23 ಸ್ಥಾನ, ಗುತ್ತಲ ಪಟ್ಟಣ ಪಂಚಾಯಿತಿಯ 18 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ತವರು ಕ್ಷೇತ್ರದ ಫಲಿತಾಂಶದಿಂದ ಸಿಎಂ ಭವಿಷ್ಯ ನಿರ್ಧಾರವಾಗಲಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯು ಕಾಂಗ್ರೆಸ್‌, ಜೆಡಿಎಸ್‌, ಬಿಜೆಪಿ ಪಕ್ಷಗಳ ಭವಿಷ್ಯದ ವಿಚಾರವಾಗಿ ಕುತೂಹಲ ಮೂಡಿಸಿದೆ. ಇದನ್ನೂ ಓದಿ: ಯುಪಿ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ದುರ್ಗಾ ಶಂಕರ್ ಮಿಶ್ರಾ ನೇಮಕ

Comments

Leave a Reply

Your email address will not be published. Required fields are marked *