ಕರ್ನಾಟಕಕ್ಕೆ 13.05 ಟಿಎಂಸಿ ಮಹದಾಯಿ ನೀರು ಹಂಚಿಕೆ

ನವದೆಹಲಿ: ಮಹದಾಯಿ ನದಿ ನೀರಿನ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಧಿಕರಣದ ಐತೀರ್ಪು ಪ್ರಕಟವಾಗಿದ್ದು, ಒಟ್ಟು 13.05 ಟಿಎಂಸಿ ನೀರನ್ನು ಹಂಚಿಕೆ ಮಾಡಿದೆ.

ಈಗ ಲಭ್ಯವಾಗಿರುವ ಮಾಹಿತಿ ಪ್ರಕಾರ ಒಟ್ಟು 13.05 ಟಿಎಂಸಿ ನೀರಿನಲ್ಲಿ, 5.5 ಟಿಎಂಸಿ ನೀರು ಕುಡಿಯುವ ಬಳಕೆಗೆ ಸಿಕ್ಕಿದರೆ, 8 ಟಿಎಂಸಿ ನೀರು ನೀರಾವರಿಗೆ ಸಿಕ್ಕಿದೆ.

ಈ ಸಂಬಂಧ ಪಬ್ಲಿಕ್ ಟಿವಿಗೆ ರಾಜ್ಯದ ವಕೀಲ ಮೋಹನ್ ಕಾತರಕಿ ಪ್ರತಿಕ್ರಿಯಿಸಿ, ನನಗೆ ಈಗ ಸಿಕ್ಕಿರುವ ಮಾಹಿತಿ ಪ್ರಕಾರ ಒಟ್ಟು 13.05 ಟಿಎಂಸಿ ನೀರು ಸಿಕ್ಕಿದೆ. ಪೂರ್ಣವಾಗಿ ನಾನು ತೀರ್ಪು ಓದಿಲ್ಲ. ಈ ತೀರ್ಪು ಸ್ವಲ್ಪ ಸಮಧಾನ, ಸ್ವಲ್ಪ ಬೇಸರ ತಂದಿದೆ ಎಂದು ಹೇಳಿದರು.

ಕರ್ನಾಟಕಕ ಪರ ವಾದ ಏನಾಗಿತ್ತು?
ಹುಬ್ಬಳ್ಳಿ- ಧಾರವಾಡಕ್ಕೆ ಕುಡಿಯುವ ನೀರಿಗೆ ಸೂಕ್ತ ಪರ್ಯಾಯವಿಲ್ಲ. ಕೇಂದ್ರ ಜಲ ಆಯೋಗದ ಪ್ರಕಾರ ಕುಡಿಯುವ ನೀರಿಗೆ ಅತಿ ಹೆಚ್ಚಿನ ಆದ್ಯತೆ ನೀಡಬೇಕು. ಕರ್ನಾಟಕಕ್ಕೆ ತನ್ನ ಪಾಲಿನ 14.98 ಟಿಎಂಸಿ ನೀರು ಬಳಕೆ ಮಾಡಲು ಅವಕಾಶ ನೀಡಬೇಕು. ಅಲ್ಲದೇ ಹೆಚ್ಚುವರಿಯಾಗಿ ಹುಬ್ಬಳ್ಳಿ ಧಾರವಾಡಕ್ಕೆ ಕುಡಿಯಲು 7.56 ಟಿಎಂಸಿ ನೀರು ಬೇಕು. ಮಹದಾಯಿಯ ನೀರು ಹು-ಧಾ ಕ್ಕೆ ಕುಡಿಯಲು ಸಿಕ್ಕರೆ ಮಲಪ್ರಭದ ಮೇಲಿನ ಒತ್ತಡ ಕಡಿಮೆ ಆಗಿ ಅದರ ನೀರನ್ನು ನೀರಾವರಿಗೆ ಬಳಸಬಹುದು. ಗೋವಾ ಸರ್ಕಾರ 113 ಟಿಎಂಸಿ ನೀರು ಮಹದಾಯಿಯಲ್ಲಿದೆ ಎನ್ನುತ್ತದೆ. ಆದರೆ 173 ಟಿಎಂಸಿ ಮಹದಾಯಿ ನೀರಿಗೆ ಬೇಡಿಕೆ ಸಲ್ಲಿಸುತ್ತದೆ. ಗೋವಾ ಮಂಡಿಸಿರುವ ವಾದ ಸರಿಯಲ್ಲ ಮತ್ತು ತಪ್ಪು ದಾರಿಗೆಳೆಯುತ್ತಿದೆ. ಅಂತಾರಾಜ್ಯ ನದಿಗಳಲ್ಲಿ ನೀರಿನ ಬಳಕೆಗೆ ಸಂಬಂಧಿಸಿದಂತೆ ಯಾವುದೇ ರಾಜ್ಯವು ಇನ್ನೊಂದು ರಾಜ್ಯದ ಅನುಮತಿ ಪಡೆಯಬೇಕು ಎಂಬುದಿಲ್ಲ. ಆದರೆ ಮತ್ತೊಂದು ರಾಜ್ಯವು ಯೋಜನೆಯಿಂದ ತನಗೆ ಹಾನಿ ಆಗುತ್ತದೆ ಎಂದರೆ ಮಾತ್ರ ದೂರು ಸಲ್ಲಿಸಬಹುದು ಎಂದು ವಾದ ಮಂಡಿಸಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

 

Comments

Leave a Reply

Your email address will not be published. Required fields are marked *