ಬೆಂಗಳೂರು: ಶತಕ ಬಾರಿಸಿದ ಬೆನ್ನಲ್ಲೇ ದೋಸ್ತಿ ಸರ್ಕಾರಕ್ಕೆ ಮತ್ತು ವಿಪಕ್ಷ ಬಿಜೆಪಿಗೆ ಲೋಕಲ್ ಟೆಸ್ಟ್ ನಡೆಯುತ್ತಿದ್ದು, ರಾಜ್ಯದ 22 ಜಿಲ್ಲೆಗಳಲ್ಲಿ ಮೊದಲ ಹಂತದ ಸ್ಥಳೀಯ ಸಂಸ್ಥೆ ಚುನಾವಣೆ ಆರಂಭವಾಗಿದೆ.
ರಾಜ್ಯದ ಮೂರು ಮಹಾನಗರ ಪಾಲಿಕೆಗಳಾದ ಮೈಸೂರು, ತುಮಕೂರು ಮತ್ತು ಶಿವಮೊಗ್ಗ ಸೇರಿ 102 ಸ್ಥಳೀಯ ಸಂಸ್ಥೆಗಳಿಗೆ ಮತದಾನ ನಡೆಯುತ್ತಿದೆ. 22 ಜಿಲ್ಲೆಗಳ 29 ನಗರಸಭೆ, 53 ಪುರಸಭೆ, 20 ಪಟ್ಟಣ ಪಂಚಾಯಿತಿಗಳಿಗೆ ಈ ಎಲೆಕ್ಷನ್ ನಡೆಯುತ್ತಿದೆ.

ಒಟ್ಟು 2634 ವಾರ್ಡ್‍ಗಳಲ್ಲಿ ಕಣಕ್ಕೆ ಇಳಿದಿದ್ದಾರೆ. 9,121 ಅಭ್ಯರ್ಥಿಗಳಿದ್ದು, ಈ ಪೈಕಿ ನಗರಸಭೆಯ 12, ಪುರಸಭೆಯ 17 ವಾರ್ಡ್‍ಗಳಲ್ಲಿ ಅವಿರೋಧ ಆಯ್ಕೆ ಮಾಡಲಾಗಿದೆ. ಲೋಕಸಮರಕ್ಕೆ ಮುನ್ನ 49 ಲಕ್ಷ ಮತದಾರರು ಲೋಕಲ್ ಭವಿಷ್ಯ ಬರೆಯಲಿದ್ದಾರೆ. ಪ್ರಕೃತಿ ವಿಕೋಪಕ್ಕೆ ತುತ್ತಾದ ಮಡಿಕೇರಿ 3 ಪಟ್ಟಣ ಪಂಚಾಯಿತಿಗಳಲ್ಲಿ ಈ ಚುನಾವಣೆ ಇಲ್ಲ.
ಅಫಜಲಪುರ ಪುರಸಭೆಯ 19ನೇ ವಾರ್ಡ್‍ನಲ್ಲಿ ಸಲ್ಲಿಕೆಯಾಗಿದ್ದ ಎಲ್ಲಾ ನಾಮಪತ್ರ ತಿರಸ್ಕೃತಗೊಂಡಿದೆ. ಕೊಳ್ಳೆಗಾಲ ನಗರಸಭೆಯ 9ನೇ ವಾರ್ಡ್‍ನಲ್ಲಿ ಬಿಎಸ್‍ಪಿ ಅಭ್ಯರ್ಥಿ ನಿಧನದ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿದೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ವಿದ್ಯುನ್ಮಾನ ಮತಯಂತ್ರ ಬಳಕೆ ಮಾಡಲಾಗಿದ್ದು, ಸೆಪ್ಟೆಂಬರ್ 3ರಂದು ದೆ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಹೊರಬೀಳಲಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv


Leave a Reply