ಚೆನ್ನೈ: ಕರೂರು ಕಾಲ್ತುಳಿತ ದುರಂತದಲ್ಲಿ (Karur Stampede) ಮೃತಪಟ್ಟ 39 ಮಂದಿಯ ಮೃತದೇಹವನ್ನು ಆಸ್ಪತ್ರೆಯ ಶವಾಗಾರದಿಂದ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.
ಸರ್ಕಾರದ ವತಿಯಿಂದ ಅಂಬುಲೆನ್ಸ್ ವ್ಯವಸ್ಥೆ ಮಾಡಿ ಮೃತದೇಹಗಳನ್ನು ರವಾನಿಸಲಾಗಿದೆ. ಕುಟುಂಬಸ್ಥರು ಮೃತದೇಹಗಳನ್ನು ಅವರವರ ಮನೆಗೆ ತೆಗೆದುಕೊಂಡು ಹೋಗಿದ್ದಾರೆ. ಸದ್ಯ ಗಾಯಾಳುಗಳು ಸರ್ಕಾರಿ ಮೆಡಿಕಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಮಿಳುನಾಡಿನ ಹಲವು ರಾಜಕೀಯ ಪಕ್ಷದ ಮುಖಂಡರುಗಳು ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಇನ್ನು ಆಸ್ಪತ್ರೆಗೆ ಡಿಸಿಎಂ ಉದಯನಿಧಿ ಭೇಟಿ ನೀಡಿ ಗಾಯಾಳುಗಳನ್ನು ಮಾತನಾಡಿಸಿ ಸಾಂತ್ವನ ಹೇಳಿದ್ದಾರೆ. ಇದನ್ನೂ ಓದಿ: ಗಮನಿಸಿ – ದಸರಾ ಪ್ರಯುಕ್ತ ಮೈಸೂರು KSRTC ಬಸ್ ಟಿಕೆಟ್ ದರ ಏರಿಕೆ
ತಮಿಳುನಾಡು ಕರೂರಿನಲ್ಲಿ ನಟ ಹಾಗೂ ರಾಜಕಾರಣಿ ವಿಜಯ್ ದಳಪತಿ (Vijay Thalapathy) ಆಯೋಜಿಸಿದ್ದ ಚುನಾವಣಾ ಪ್ರಚಾರದ ರ‍್ಯಾಲಿ ವೇಳೆ ಕಾಲ್ತುಳಿತ ದುರಂತ ನಡೆದಿದೆ. ಘಟನೆಯಲ್ಲಿ 39 ಮಂದಿ ಸಾವನ್ನಪ್ಪಿದ್ದು, 48 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಕಾಲ್ತುಳಿತಕ್ಕೆ ಪೊಲೀಸರ ಲಾಠಿಚಾರ್ಜ್ ಕಾರಣ: ಟಿವಿಕೆ ಆರೋಪ
ಮಧ್ಯಾಹ್ನದ ಸುಡು ಬಿಸಿಲಿನಲ್ಲಿ ವಿಜಯ್ ಅವರಿಗಾಗಿ ಕಾಯುತ್ತಿದ್ದ ಅಭಿಮಾನಿಗಳು ಸುಸ್ತಿನಿಂದ ಬಳಲುತ್ತಿದ್ದರು. ಇನ್ನು ಇದೇ ವೇಳೆ 9 ವರ್ಷದ ಬಾಲಕಿ ಕಳೆದು ಹೋಗಿರ್ತಾಳೆ. ಆಗ ವಿಜಯ್ ಮೈಕ್ ಮೂಲಕ ಪೊಲೀಸರಿಗೆ ಮನವಿ ಮಾಡ್ತಾರೆ. ಮೈಕ್‌ನಲ್ಲಿ ಅನೌನ್ಸ್ ಮಾಡುತ್ತಲೇ ನೂಕುನುಗ್ಗಲು ಉಂಟಾಗಿದೆ. ಈ ವೇಳೆ ಉಸಿರಾಟದ ತೊಂದರೆ ಅನುಭವಿಸಿದ ಜನರು ಮೂರ್ಛೆ ತಪ್ಪಿ ಬಿದ್ದಿದ್ದಾರೆ. ಅಂದ್ಹಾಗೆ ರ‍್ಯಾಲಿ ತಡವಾಗಿ ಸಂಜೆ ಆರಂಭವಾಗಿತ್ತು. ಹೀಗಾಗಿ ವಿಜಯ್ ನೋಡಲು ಫ್ಯಾನ್ಸ್ ಮುಗಿ ಬಿದ್ದಿದ್ರು. ಅಲ್ಲದೇ ರ‍್ಯಾಲಿ ವೇಳೆ ಕರೆಂಟ್ ತೆಗೆದಿದ್ದರಿಂದ ದುರಂತ ಸಂಭವಿಸಿದೆ. ಇದನ್ನೂ ಓದಿ: RSS ಸ್ವಯಂಸೇವಕರ ಪ್ರತಿಯೊಂದು ಕೆಲಸವೂ ದೇಶ ಮೊದಲು ಅನ್ನೋದನ್ನ ಕಲಿಸುತ್ತೆ – ಮೋದಿ ಮನದ ಮಾತು
ಇನ್ನು ಮೃತರ ಕುಟುಂಬಸ್ಥರಿಗೆ ವಿಜಯ್ ದಳಪತಿ ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೇ ಗಾಯಾಳುಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಇನ್ನೂ ಘಟನೆ ಸಂಬಂಧ ಟಿವಿಕೆ ಸ್ಥಳೀಯ ಕಾರ್ಯದರ್ಶಿ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: Bannerghatta | ಸಫಾರಿಗೆ ತೆರಳಿದ್ದ ಪ್ರವಾಸಿಗ ಹೃದಯಾಘಾತಕ್ಕೆ ಬಲಿ
