KEA ಪರೀಕ್ಷೆ ಅಕ್ರಮ ಪ್ರಕರಣ – ಇಬ್ಬರು ಪ್ರಾಂಶುಪಾಲರ ಬಂಧನ

ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕಳೆದ ತಿಂಗಳು 28 ರಂದು ನಡೆಸಿದ ವಿವಿಧ ಸ್ಪರ್ಧಾತ್ಮಕ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮಕ್ಕೆ ಸಂಬಂಧಿಸಿದಂತೆ ಬುಧವಾರ ಸಿಐಡಿ ಅಧಿಕಾರಿಗಳು ಇಬ್ಬರು ಪ್ರಾಂಶುಪಾಲರನ್ನು (Principal) ಬಂಧಿಸಿದ್ದಾರೆ.

ಜಿಲ್ಲೆಯ ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಚಂದ್ರಕಾಂತ್, ಅಫಜಲಪುರದ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಬಸವರಾಜ್ ಪೂಜಾರಿ ಅವರನ್ನು ಪರೀಕ್ಷಾ ಅಕ್ರಮಕ್ಕೆ ನೆರವಾದ ಹಿನ್ನೆಲೆಯಲ್ಲಿ ಸಿಐಡಿ ಪೋಲಿಸರು ಬಂಧನ ಮಾಡಿದ್ದಾರೆ. ಇದನ್ನೂ ಓದಿ: ಸಿಎಂ ಸಂಧಾನ ಯಶಸ್ವಿ – ಅಧಿವೇಶನಕ್ಕೆ ಹೋಗ್ತೀನಿ, ಗ್ಯಾರಂಟಿಯಿಂದ ಅನುದಾನ ಸಿಗುತ್ತಿಲ್ಲ ಎಂದ ಬಿಆರ್‌ ಪಾಟೀಲ್‌

ಇವರಿಬ್ಬರು ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಅದೇ ವಿಷಯದಲ್ಲಿ ಇದೀಗ ಸಿಐಡಿ ಬಲೆಗೆ ಬಿದ್ದಿದ್ದಾರೆ. ಕೆಲ ದಿನಗಳ ಹಿಂದೆ ಇದೇ ಇಬ್ಬರು ಪ್ರಾಂಶುಪಾಲರನ್ನು ಸಿಐಡಿ ಅಧಿಕಾರಿಗಳು ಸಿಐಡಿ ಕಚೇರಿಗೆ ಕರೆಸಿದ್ದರು. ಇದೀಗ ಅವರನ್ನು ಬಂಧಿಸಿ ನ್ಯಾಯಾಧೀಶರ ಎದುರು ಹಾಜರುಪಡಿಸಲಿದ್ದಾರೆ. ಇದನ್ನೂ ಓದಿ: ತಂಬಾಕು ಚೀಲಗಳಲ್ಲಿ ತುಂಬಿ ದಾಖಲೆ ಇಲ್ಲದೆ ಸಾಗಿಸ್ತಿದ್ದ 8 ಕೋಟಿ ಹಣ ಜಪ್ತಿ