ಚಿನ್ನ ಕಳ್ಳಸಾಗಣೆ ಪ್ರಕರಣ- 15 ತಿಂಗಳ ಬಳಿಕ ಸ್ವಪ್ನಾ ಸುರೇಶ್‌ಗೆ ಜಾಮೀನು, ಜೈಲಿನಿಂದ ರಿಲೀಸ್‌

ತಿರುವನಂತಪುರ: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಸ್ವಪ್ನಾ ಸುರೇಶ್‌ ಅವರಿಗೆ 15 ತಿಂಗಳ ಬಳಿಕ ಜಾಮೀನು ಮಂಜೂರಾಗಿದ್ದು, ಶನಿವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು (ಎನ್‌ಐಎ) ದಾಖಲಿಸಿದ್ದ ಯುಎಪಿಎ (ಕಾನೂನುಬಾಹಿರ ಚಟುವಟಿಕೆ ತಡೆಗಟ್ಟುವಿಕೆ ಕಾಯ್ದೆ) ಪ್ರಕರಣದಲ್ಲಿ ಆರೋಪಿ ಸ್ವಪ್ನಾ ಅವರಿಗೆ ನವೆಂಬರ್‌ 2 ರಂದು ಕೇರಳ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿತ್ತು. 25 ಲಕ್ಷ ರೂ. ಬಾಂಡ್‌ ಹಾಗೂ ಶೂರಿಟಿಯೊಂದಿಗೆ ಜಾಮೀನು ನೀಡಿತ್ತು. ಇದನ್ನೂ ಓದಿ: ಒಬ್ಬ ಡ್ಯಾನ್ಸರ್ ಬರಬಹುದು, ಫೈಟರ್ ಬರಬಹುದು, ಆದ್ರೆ ಅಪ್ಪು ಬರಲ್ಲ: ರಮೇಶ್ ಅರವಿಂದ್

ಸ್ವಪ್ನಾ ಅವರೊಂದಿಗೆ ಇತರೆ 7 ಆರೋಪಿಗಳಾದ ಮೊಹಮ್ಮದ್ ಶಫಿ ಪಿ, ಜಲಾಲ್ ಎ.ಎಂ., ರಾಬಿನ್ಸ್ ಹಮೀದ್, ರಮೀಸ್ ಕೆ.ಟಿ., ಶರಫುದ್ದೀನ್ ಕೆ.ಟಿ., ಸರಿತಾ ಪಿ.ಎಸ್ ಮತ್ತು ಮೊಹಮ್ಮದ್ ಅಲಿ ಅವರಿಗೂ ನ.2ರಂದು ಕೋರ್ಟ್‌ ಜಾಮೀನು ನೀಡಿತ್ತು. ಇದನ್ನೂ ಓದಿ: ಸಾರ್ವಜನಿಕರ ಆಸ್ತಿಗೆ ಹಾನಿಗೊಳಿಸಿದ್ರೆ ಪ್ರತಿಭಟನಾಕಾರರಿಂದಲೇ ವಸೂಲಿ- ಮಸೂದೆ ಜಾರಿಗೆ ಮಧ್ಯಪ್ರದೇಶ ಚಿಂತನೆ

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಕೆ.ವಿನೋದ್‌ ಚಂದ್ರನ್‌ ಮತ್ತು ಜಯಚಂದ್ರನ್‌ ಅವರಿದ್ದ ಪೀಠವು, ಆರೋಪಿಗಳು ಭಯೋತ್ಪಾದನೆ ಕೃತ್ಯಗಳಲ್ಲಿ ತೊಡಗಿದ್ದರು ಎಂಬುದಕ್ಕೆ ಯಾವುದೇ ಸಾಕ್ಷ್ಯಾಧಾರ ಲಭ್ಯವಾಗಿಲ್ಲ ಎಂದು ಸ್ಪಷ್ಟಪಡಿಸಿತ್ತು.

Comments

Leave a Reply

Your email address will not be published. Required fields are marked *