ಕೇರಳದಲ್ಲಿ 13 ನೊರೊವೈರಸ್ ಪ್ರಕರಣ ಪತ್ತೆ – ನೀರಿನಿಂದ ಹರಡುವ ಹೊಸ ಕಾಯಿಲೆ

ತಿರುವನಂತಪುರ: ಕೇರಳದ ವಯನಾಡು ಜಿಲ್ಲೆಯಲ್ಲಿ ನೊರೊವೈರಸ್(Norovirus) ಪ್ರಕರಣಗಳು ದೃಢಪಟ್ಟಿರುವ ಹಿನ್ನೆಲೆ ಜನರು ಜಾಗರೂಕರಾಗಿರಬೇಕು ಎಂದು ಕೇರಳ ಸರ್ಕಾರ ಶುಕ್ರವಾರ ತಿಳಿಸಿದೆ.

ಎರಡು ವಾರಗಳ ಹಿಂದೆ ವಯನಾಡು ಜಿಲ್ಲೆಯ ವೈತಿರಿ ಬಳಿಯ ಪೂಕೋಡ್‍ನಲ್ಲಿರುವ ಪಶುವೈದ್ಯಕೀಯ ಕಾಲೇಜಿನ ಸುಮಾರು 13 ವಿದ್ಯಾರ್ಥಿಗಳಲ್ಲಿ ನೊರೊವೈರಸ್ ಸೋಂಕು ಪತ್ತೆಯಾಗಿದೆ. ಸೋಂಕಿನ ಹರಡುವಿಕೆಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಹಲವಾರು ಮಾರ್ಗಸೂಚಿಗಳನ್ನು ಜಾರಿಗೆ ತರಲಾಗಿದೆ ಮತ್ತು ಜನರಲ್ಲಿ ರೋಗದ ಬಗ್ಗೆ ಜಾಗೃತಿ ಮೂಡಿಸುವಂತೆ ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ನಿರ್ದೇಶನ ನೀಡಿದ್ದಾರೆ. ಇದನ್ನೂ ಓದಿ: ಅಪ್ಪು ಅತ್ತೆ ನಾಗಮ್ಮಗೆ ಸುದ್ದಿ ಇನ್ನೂ ಗೊತ್ತೇ ಇಲ್ಲ- ಗಾಜನೂರಿನ ಪ್ರತಿ ಮನೆಯಲ್ಲೂ ನೀರವ ಮೌನ!

ಈ ಕುರಿತಂತೆ ವೀಣಾ ಜಾರ್ಜ್ ಅವರು ಇಲ್ಲಿ ಆರೋಗ್ಯ ಅಧಿಕಾರಿಗಳ ಸಭೆ ನಡೆಸಿ, ವಯನಾಡಿನ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಆರೋಗ್ಯ ಇಲಾಖೆ ಪ್ರಕಟಣೆಯ ಪ್ರಕಾರ, ವೈರಸ್ ಹರಡುವುದನ್ನು ತಡೆಯಲು ಚಟುವಟಿಕೆಗಳನ್ನು ತೀವ್ರಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪ್ರಸ್ತುತ ಸೋಂಕಿನ ಕುರಿತಂತೆ ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ. ಆದರೆ ಎಲ್ಲರೂ ಜಾಗರೂಕರಾಗಿರಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಿಂದೂ ಧರ್ಮ, ಹಿಂದುತ್ವ ಬೇರೆ ಬೇರೆ: ರಾಹುಲ್ ಗಾಂಧಿ

ಸೂಪರ್ ಕ್ಲೋರಿನೇಷನ್ ಸೇರಿದಂತೆ ಸೋಂಕು ತಡೆಗಟ್ಟುವ ಚಟುವಟಿಕೆಗಳು ನಡೆಯುತ್ತಿವೆ. ಕುಡಿಯುವ ನೀರಿನ ಮೂಲಗಳು ನೈರ್ಮಲ್ಯವಾಗಿರುವಂತೆ ನೋಡಿಕೊಳ್ಳಬೇಕು ಮತ್ತು ಸರಿಯಾದ ತಡೆಗಟ್ಟುವಿಕೆ ಮತ್ತು ಚಿಕಿತ್ಸೆಯಿಂದ ರೋಗವನ್ನು ತ್ವರಿತವಾಗಿ ಗುಣಪಡಿಸಬಹುದು. ಹಾಗಾಗಿ ಪ್ರತಿಯೊಬ್ಬರು ರೋಗ ಮತ್ತು ಅದರ ತಡೆಗಟ್ಟುವ ವಿಧಾನಗಳ ಬಗ್ಗೆ ತಿಳಿದಿರಬೇಕು ಎಂದು ಹೇಳಿದ್ದಾರೆ.

Comments

Leave a Reply

Your email address will not be published. Required fields are marked *