ನವದೆಹಲಿ: ಕೇರಳದ ಕೆಲ ಯೂತ್ ಕಾಂಗ್ರೆಸ್ ಸದಸ್ಯರು ಶನಿವಾರದಂದು ನಡು ರಸ್ತೆಯಲ್ಲೇ ಗೋಹತ್ಯೆ ಮಾಡಿದ್ದನ್ನು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಕೇರಳದಲ್ಲಿ ನಿನ್ನೆ ನಡೆದಿರುವ ಘಟನೆ ನಿಜಕ್ಕೂ ಅನಾಗರಿಕವಾದುದು. ಇದನ್ನು ನಾನಗಲೀ, ಕಾಂಗ್ರೆಸ್ ಪಕ್ಷವಾಗಲೀ ಸಹಿಸಿಕೊಳ್ಳಲು ಸಾಧ್ಯವೇ ಇಲ್ಲ. ಈ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ.
ಕಸಾಯಿಖಾನೆಗಳಿಗೆ ಗೋವುಗಳ ಮಾರಾಟ ಮಾಡುವುದಕ್ಕೆ ಕೇಂದ್ರ ಸರ್ಕಾರ ನಿಷೇಧ ಹೇರಿರುವುದನ್ನು ವಿರೋಧಿಸಿ ಕೇರಳದಲ್ಲಿ ಶನಿವಾರದಂದು ನಡೆದಿದ್ದ ಪ್ರತಿಭಟನೆ ವೇಳೆ ಕೆಲ ಯೂತ್ ಕಾಂಗ್ರೆಸ್ ಸದಸ್ಯರು ನಡು ರಸ್ತೆಯಲ್ಲೇ ಗೋವನ್ನು ಕಡಿದಿದ್ದರು.
ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಯುವ ಮೋರ್ಚಾದ ದೂರಿನನ್ವಯ ಕೇರಳ ಪೊಲೀಸರು ಕೆಲ ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿದ್ದಾರೆ.
What happened in Kerala yesterday is thoughtless,barbaric& completely unacceptable to me &the Congress Party.I strongly condemn the incident
— Rahul Gandhi (@RahulGandhi) May 28, 2017

Leave a Reply