ನೈತಿಕ ಸ್ಥೈರ್ಯ ಕುಗ್ಗಿಸೋದು ಕಾಂಗ್ರೆಸ್ ಕನಸು: ಕೆಜಿ ಬೋಪಯ್ಯ

ಮಡಿಕೇರಿ: ಬಿಜೆಪಿ ಅಥವಾ ನಮ್ಮ ಸರ್ಕಾರದ ವಿರುದ್ಧ ಮಾತನಾಡುವುದಕ್ಕೆ ಕಾಂಗ್ರೆಸ್ಸಿಗೆ ಬೇರೆ ವಿಷಯಗಳಿಲ್ಲ. ಹೀಗಾಗಿ ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಷಯವನ್ನು ತೆಗೆದುಕೊಂಡು ಪ್ರತಿಭಟಿಸುತ್ತಿದೆ ಎಂದು ವಿರಾಜಪೇಟೆ ಬಿಜೆಪಿ ಶಾಸಕ ಕೆ ಜಿ ಬೋಪಯ್ಯ ಕಾಂಗ್ರೆಸ್ಸಿಗೆ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಈಶ್ವರಪ್ಪ ಅವರನ್ನು ಬಂಧಿಸುವಂತೆ ಕಾಂಗ್ರೆಸ್ ಆಹೋರಾತ್ರಿ ಪ್ರತಿಭಟನೆ ನಡೆಸುತ್ತಿದೆ. ಅದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಎಲ್ಲರಿಗೂ ಮರುಕವಿದೆ. ಆದರೆ ಕಾಂಗ್ರೆಸ್ ಅದನ್ನೇ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಓದಿ: ನಾವೆಲ್ಲಾ ಬಾರ್‌ನಲ್ಲಿ ಕುಡಿದಿದ್ವಿ, ಸಂತೋಷ್ ಫ್ರೂಟ್ ಜ್ಯೂಸ್ ತಗೊಂಡು ರೂಮ್‍ಗೆ ಹೋಗಿದ್ದರು – ಸ್ನೇಹಿತರು ಹೇಳಿದ್ದೇನು?

ಈ ಪ್ರತಿಭಟನೆ ಮಾಡಿ ಬಿಜೆಪಿಯನ್ನು ನೈತಿಕವಾಗಿ ಕುಗ್ಗಿಸಬಹುದು ಎಂದು ಕಾಂಗ್ರೆಸ್ ಅಂದುಕೊಂಡಿದೆ. ಆದರೆ ಅದು ಸಾಧ್ಯವಿಲ್ಲ. ಅದೇನಿದ್ದರೂ ಕಾಂಗ್ರೆಸ್ಸಿನ ಕನಸು ಎಂದು ಲೇವಡಿ ಮಾಡಿದ್ದಾರೆ.  ಇದನ್ನೂ ಓದಿ: ತಪ್ಪು ಮಾಡಿದ್ದರೆ ಶಿಕ್ಷಿಸು, ಇಲ್ಲವೇ ರಕ್ಷಿಸು – ಮನೆದೇವರ ಮೊರೆಹೋದ ಈಶ್ವರಪ್ಪ

ಕಾಂಗ್ರೆಸ್ ಸರ್ಕಾರದ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡರು. ಆಗ ಗೃಹ ಸಚಿವರಾಗಿದ್ದ ಜಾರ್ಜ್ ರಾಜೀನಾಮೆಯನ್ನು ಕೊಟ್ಟಿರಲಿಲ್ಲ. ಕೊನೆ ಪಕ್ಷ ಅವರ ವಿರುದ್ಧ ಪ್ರಕರಣ ಕೂಡ ದಾಖಲಾಗಿರಲಿಲ್ಲ. ಖಾಸಗಿ ದೂರು ದಾಖಲಾದ ಮೇಲೆ ಎಷ್ಟೋ ದಿನಗಳ ನಂತರ ಜಾರ್ಜ್ ರಾಜೀನಾಮೆ ನೀಡಿದ್ದರು. ಸಚಿವ ಈಶ್ವರಪ್ಪ ವಿರುದ್ಧವೂ ಯಾವುದೇ ನೇರ ಸಾಕ್ಷ್ಯಗಳು ಇಲ್ಲ. ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಯಾವುದೇ ಸಾಕ್ಷ್ಯ ಆಧಾರಗಳಿಲ್ಲದೆ ಹೇಗೆ ಬಂಧಿಸಲು ಸಾಧ್ಯ ಎಂದು ಪ್ರಶ್ನಿಸಿದರು.

Comments

Leave a Reply

Your email address will not be published. Required fields are marked *