ನಿರ್ಮಾಪಕಿಯಾದ ರಾಕಿಂಗ್ ಸ್ಟಾರ್ ಯಶ್ ತಾಯಿ

ರಾಕಿಂಗ್ ಸ್ಟಾರ್ ಯಶ್ (Yash) ಅವರು ನಟ ಕಮ್ ನಿರ್ಮಾಪಕನಾಗಿ ಬ್ಯುಸಿಯಾಗಿದ್ದಾರೆ. ಇದೀಗ ಯಶ್ ಅವರ ತಾಯಿ ಪುಷ್ಪ ಅರುಣ್ ಕುಮಾರ್ (Pushpa Arun Kumar) ಅವರು ಸಿನಿಮಾ ನಿರ್ಮಾಣಕ್ಕೀಳಿದಿದ್ದಾರೆ. ಈ ಮೂಲಕ ರಾಕಿ ಭಾಯ್ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಸಿಕ್ಕಿದೆ. ಇದನ್ನೂ ಓದಿ:ಭಾರತ ಹಿಂದೂಗಳಂತೆ ಮುಸ್ಲಿಮರಿಗೂ ಸೇರಿದೆ – ಪಹಲ್ಗಾಮ್ ದಾಳಿ ಬಗ್ಗೆ ರಾಖಿ ಸಾವಂತ್ ಮಾತು

ನಟ ಯಶ್ ಅವರ ತಾಯಿ ಪುಷ್ಪ ಅರುಣ್ ಕುಮಾರ್ ಅವರು ‘ಪಿಎ ಪ್ರೊಡಕ್ಷನ್ಸ್’ ಎಂಬ ಹೊಸ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಯಶ್‌ ತಾಯಿ ಹೆಸರು ಪುಷ್ಪ, ತಂದೆ ಅರುಣ್‌ ಕುಮಾರ್‌ ಹೀಗಾಗಿ ನಿರ್ಮಾಣ ಸಂಸ್ಥೆಗೆ ʻಪಿಎ ಪ್ರೋಡಕ್ಷನ್ಸ್‌ʼ ಎಂದು ಇಡಲಾಗಿದೆ. ಇದರ ಮೂಲಕ ಹೊಸ ಪ್ರತಿಭೆಗಳ ಕನಸಿಗೆ ಸಾಥ್ ನೀಡ್ತಿದ್ದಾರೆ. ಈ ಸಂಸ್ಥೆಯ ಮೂಲಕ ಈಗಾಗಲೇ ಸಿನಿಮಾ ಕೆಲಸ ಶುರುವಾಗಿದೆ. ಏ.29ರಂದು ಬೆಳಗ್ಗೆ 11 ಗಂಟೆಗೆ ಚಿತ್ರದ ಟೈಟಲ್ ಮತ್ತು ಫಸ್ಟ್ ಲುಕ್ ಅನಾವರಣ ಮಾಡೋದಾಗಿ ತಿಳಿಸಿದ್ದಾರೆ. ಇದನ್ನೂ ಓದಿ:ಯಶ್‌ ನಟನೆಯ ರಾಮಾಯಣ ಚಿತ್ರದ ಫಸ್ಟ್‌ ಗ್ಲಿಂಪ್ಸ್ WAVES ಶೃಂಗಸಭೆಯಲ್ಲಿ ರಿಲೀಸ್‌

ವಿಶೇಷ ಅಂದ್ರೆ, ಪುಷ್ಪ ಅವರ ನಿರ್ಮಾಣದ ಚೊಚ್ಚಲ ಸಿನಿಮಾದಲ್ಲಿ ‘ದಿಯಾ’ (Dia) ಖ್ಯಾತಿಯ ಪೃಥ್ವಿ ಅಂಬರ್ ನಾಯಕನಾಗಿ ನಟಿಸುತ್ತಿದ್ದಾರೆ. ಅವರೊಂದಿಗೆ ‘ಕೆಂಡಸಂಪಿಗೆ’ ಖ್ಯಾತಿಯ ಕಾವ್ಯ ಶೈವ, ಗೋಪಾಲ ಕೃಷ್ಣ ದೇಶಪಾಂಡೆ ಸೇರಿದಂತೆ ಅನೇಕರು ಕಾಣಿಸಿಕೊಳ್ತಿದ್ದಾರೆ. ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ಏ.29ರಂದು ಸಿಗಲಿದೆ.

ಅಂದಹಾಗೆ, ‘ಟಾಕ್ಸಿಕ್’ ಚಿತ್ರಕ್ಕೆ (Toxic) ನಾಯಕ ಕಮ್ ಸಹ ನಿರ್ಮಾಪಕನಾಗಿ ಯಶ್ ಕಾರ್ಯ ನಿರ್ವಹಿಸುತ್ತಿದ್ದಾರೆ. ‘ರಾಮಾಯಣ’ (Ramayana) ಚಿತ್ರದಲ್ಲಿ ರಾವಣನಾಗಿ ರಾಕಿ ಭಾಯ್ ನಟಿಸಲಿದ್ದಾರೆ. ಈ ಚಿತ್ರಕ್ಕೂ ಅವರು ಸಹ ನಿರ್ಮಾಪಕರಾಗಿದ್ದಾರೆ.