ಏಪ್ರಿಲ್‍ನಲ್ಲಿ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್: ನಾರಾಯಣ ಗೌಡ

ಬೆಂಗಳೂರು: ಬಹು ನಿರೀಕ್ಷಿತ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021ಕ್ಕೆ ದಿನಗಣನೆ ಆರಂಭವಾಗಿದ್ದು, ಬಹುತೇಕ ಏಪ್ರಿಲ್ 24 ರಿಂದ ಮೇ 3 ರವೆರೆಗೆ ನಡೆಯುವ ಸಾಧ್ಯತೆ ಇದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣ ಗೌಡ ಹೇಳಿದ್ದಾರೆ.

ವಿಧಾನಸೌಧದಲ್ಲಿ ಇಂದು ಕ್ರೀಡಾ ಇಲಾಖೆ ಅಧಿಕಾರಿಗಳು ಹಾಗೂ ಜೈನ್ ವಿ.ವಿ ಕುಲಪತಿಗಳೊಂದಿಗೆ ಸಚಿವರು ಸಭೆ ನಡೆಸಿ, ಕ್ರೀಡಾ ಕೂಟ ಆಯೋಜನೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ:  ಪಾಕ್ ಕ್ರಿಕೆಟ್ ಲೀಗ್‍ಗಿಂತ ಐಪಿಎಲ್ ದುಬಾರಿ – ಪ್ರಶಸ್ತಿ ಮೊತ್ತದಲ್ಲಿ ಭಾರಿ ವ್ಯತ್ಯಾಸ

ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್-2021 ಉದ್ಘಾಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಆಹ್ವಾನಿಸಿದ್ದು, ಬಹುತೇಕ ಅವರು ಬರುವುದು ನಿಚ್ಚಳವಾಗಿದೆ ಎಂದು ಸಚಿವರು ತಿಳಿಸಿದರು. ಇದನ್ನೂ ಓದಿ: ಮಗು ಕಳೆದುಕೊಂಡ ದುಃಖದಲ್ಲೇ ರಣಜಿ ಆಡುತ್ತಿದ್ದ ವಿಷ್ಣು ಸೋಲಂಕಿಗೆ ಮತ್ತೊಂದು ಆಘಾತ

ಇದೇ ಮೊದಲ ಬಾರಿಗೆ 23 ಗೇಮ್‍ಗಳನ್ನು ಆಯೋಜಿಸುತ್ತಿದ್ದು, ರಾಷ್ಟ್ರಾದ್ಯಂತ ಸುಮಾರು 8,000 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಕರ್ನಾಟಕದ ಮಲ್ಲಕಂಬ, ಯೋಗ, ಕರಾಟೆ ಕ್ರೀಡೆಗಳನ್ನು ಇದೇ ಮೊದಲ ಬಾರಿಗೆ ಈ ಕ್ರೀಡಾ ಕೂಟದಲ್ಲಿ ಪರಿಚಯಿಸಲಾಗುತ್ತಿದೆ. ಕ್ರೀಡಾ ಕೂಟದ ಲೋಗೋಗೆ ಕೇಂದ್ರ ಕ್ರೀಡಾ ಸಚಿವಾಲಯವು ಅನುಮೋದನೆ ನೀಡಿದ್ದು, ಸದ್ಯದಲ್ಲಿಯೇ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಲೋಕಾರ್ಪಣೆಗೊಳಿಸಲಿದ್ದಾರೆ. ಇದೇ ಮೊದಲ ಬಾರಿಗೆ ಅದ್ಧೂರಿ ಕ್ರೀಡಾ ಕೂಟವನ್ನು ಆಯೋಜಿಸುವ ಅವಕಾಶ ಸಿಕ್ಕಿದ್ದು ಅತ್ಯುತ್ತಮವಾಗಿ ಕ್ರೀಡಾಕೂಟವನ್ನು ಸಂಘಟಿಸಲಾಗುವುದು ಎಂದರು.

 

Comments

Leave a Reply

Your email address will not be published. Required fields are marked *