ಬಹುನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣ ಬಿಡುಗಡೆ ಮುಂದೂಡಿಕೆ!

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಭಾರೀ ನಿರೀಕ್ಷೆಯನ್ನು ಹುಟ್ಟಿಸಿರುವ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಿದೆ. ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಕಾರಣದಿಂದ ಚಿತ್ರತಂಡ ಸಿನಿಮಾದ ರಿಲೀಸ್ ದಿನಾಂಕವನ್ನು ಮುಂದೂಡುವುದಾಗಿ ಘೋಷಿಸಿದೆ.

ರಂಗಿತರಂಗ ಖ್ಯಾತಿಯ ಅನೂಪ್ ಭಂಡಾರಿ ನಿರ್ದೇಶನದಲ್ಲಿ ನಿರ್ಮಾಣಗೊಂಡಿರುವ ಸಿನಿಮಾ ಫೆಬ್ರವರಿ 24ರಂದು ಬಿಡುಗಡೆಯಾಗಬೇಕಿತ್ತು. ಆದರೆ ಕೊರೊನಾ ಭೀತಿಯಿಂದಾಗಿ ಸಿನಿಮಾ ಸೇರಿದಂತೆ ಎಲ್ಲಾ ವಾಣಿಜ್ಯ ಉದ್ಯಮಗಳು ಆತಂಕಕ್ಕೆ ಒಳಗಾಗಿವೆ. ಹೀಗಾಗಿ ಸಿನಿಮಾವನ್ನು ಮುಂದೂಡುವುದಾಗಿ ಚಿತ್ರ ತಂಡ ಘೋಷಿಸಿದೆ. ಇದನ್ನೂ ಓದಿ: ಚಿರು ಸ್ನೇಹಿತನ ಮಗನಿಗೆ ಹೇರ್ ಸ್ಟೈಲಿಸ್ಟ್ ಆದ ರಾಯನ್- ಫೋಟೋ ವೈರಲ್

‘ನಮ್ಮ ಕನಸು ಫೆಬ್ರವರಿ 24ರಂದು ನಿಮ್ಮ ಮುಂದೆ ತರಲು ನಾವು ಉತ್ಸುಕರಾಗಿದ್ದರೂ, ಪ್ರಸ್ತುತ ಕೋವಿಡ್ ಪರಿಸ್ಥಿತಿ ಹಾಗೂ ಅದಕ್ಕೆ ಸಂಬಂಧಿಸಿದ ನಿಯಮಾವಳಿಗಳು, ಪ್ರಪಂಚದಾದ್ಯಂತ ನಮ್ಮ ಸಿನಿಮಾವನ್ನು ತಲುಪಿಸಲು ಅನುಕೂಲಕರವಾಗಿಲ್ಲ. ನಿಮ್ಮ ಪ್ರೀತಿ ಹಾಗೂ ತಾಳ್ಮೆಗೆ ನಾವು ಆಭಾರಿ. ಅದಕ್ಕೆ ಪ್ರತಿಯಾಗಿ, ನೀವು ಮನಸಾರೆ ಸ್ವೀಕರಿಸುವಂತಹ ಚಿತ್ರ ನಿಮ್ಮ ಮುಂದೆ ತರುತ್ತೇವೆ ಎಂಬ ಭರವಸೆ ನಮಗಿದೆ. ಭಾರತದ ಮೊದಲ ಅಡ್ವೆಂಚರ್ ಹೀರೋನನ್ನು ಪ್ರಪಂಚಕ್ಕೆ ಪರಿಚಯಿಸುವ ಹೊಸ ದಿನಾಂಕವನ್ನು ಶೀಘ್ರದಲ್ಲೇ ನಿಮಗೆ ತಿಳಿಸುತ್ತೇವೆ ಎಂದು ನಿರ್ದೇಶಕ ಅನೂಪ್ ಭಂಡಾರಿ ಇನ್‍ಸ್ಟಾಗ್ರಾಮ್ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ನಿದ್ದೆಗಳಿಲ್ಲದ ರಾತ್ರಿ ಕಳೆಯಲು ಸಿದ್ಧರಾಗಿ – ಪ್ರಿಯಾಂಕಾಗೆ ಅನುಷ್ಕಾ ಶರ್ಮಾ ವಿಶ್

 

View this post on Instagram

 

A post shared by Manjunathgowda (@jack_manjunath_)

ಬಹು ನಿರೀಕ್ಷಿತ ಸ್ಯಾಂಡಲ್‍ವುಡ್ ಸಿನಿಮಾದಲ್ಲಿ ಕಿಚ್ಚ ಸುದೀಪ್, ನಿರೂಪ್ ಭಂಡಾರಿ, ಜಾಕ್ವೆಲಿನ್ ಫರ್ನಾಂಡಿಸ್ ಮುಂತಾದವರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಒಟಿಟಿ ಮುಖಾಂತರ ಸಿನಿಮಾವನ್ನು ಬಿಡುಗಡೆ ಮಾಡಲು ಒಪ್ಪದ ಚಿತ್ರತಂಡ ನೇರವಾಗಿ ಚಿತ್ರಮಂದಿರದಲ್ಲೇ ಬಿಡುಗಡೆ ಮಾಡಲು ಸರಿಯಾದ ಸಮಯಕ್ಕೆ ನಿರೀಕ್ಷಿಸುತ್ತಿದೆ.

Comments

Leave a Reply

Your email address will not be published. Required fields are marked *