ಕುತೂಹಲ ಮೂಡಿಸಿತು ಕಿರಣ್ ಮಜುಂದಾರ್ ಶಾ, ಸಿಎಂ ಎಚ್‍ಡಿಕೆ ಭೇಟಿ!

ಬೆಂಗಳೂರು: ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಅವರನ್ನು ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಭೇಟಿ ಮಾಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕಿರಣ್, ಪ್ರಮುಖವಾಗಿ ಬೆಂಗಳೂರಿನ ಟ್ರಾಫಿಕ್ ನಿಯಂತ್ರಣ ಬಗ್ಗೆ, ಕಸ ನಿರ್ವಹಣೆ ಕುರಿತಾಗಿ ಮುಖ್ಯಮಂತ್ರಿ ಜೊತೆ ಚರ್ಚೆ ನಡೆಸಿದೆ ಅಂತ ಹೇಳಿದ್ರು.

ಈ ಕುರಿತು ಸಮಸ್ಯೆ ಬಗೆಹರಿಸಲು ಸಿಎಂ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಕೆಲವೇ ತಿಂಗಳಲ್ಲಿ ಇಂದಿನ ಚರ್ಚೆಯ ಪರಿಣಾಮ ಎದುರಿಸಲಿದ್ದೇವೆ. ಟ್ರಾಫಿಕ್ ನಿಯಂತ್ರಣಕ್ಕೆ ಬೃಹತ್ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ಮನವಿ ಮಾಡಿದ್ದೇವೆ ಅಂದ್ರು.

ಮೆಟ್ರೋ ಕಾಮಗಾರಿ ಉತ್ತರ ರೀತಿಯಲ್ಲಿ ಸಾಗಿದೆ. ವೈಟ್ ಫೀಲ್ಡ್, ಎಲೆಕ್ಟ್ರಾನಿಕ್ ಸಿಟಿ ಹಾಗು ಹೆಬ್ಬಗೋಡಿಯಂತ್ರ ಸಂಚಾರಿ ದಟ್ಟಣೆಯ ಪ್ರದೇಶಗಳಿಗೆ ಮೆಟ್ರೋ ಅವಶ್ಯಕವಾಗಿದೆ. ಈ ಎಲ್ಲ ವಿಚಾರಗಳ ಬಗ್ಗೆ ಸಿಎಂ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಕೆಲವೇ ತಿಂಗಳಲ್ಲಿ ಇಂದಿನ ಚರ್ಚಾ ವಿಷಯಗಳ ಬಗ್ಗೆ ಪರಿಣಾಮ ಕಾಣುವ ವಿಶ್ವಾಸವಿದೆ ಅಂತ ಅವರು ತಿಳಿಸಿದ್ರು.

ಕಿರಣ್ ಮಜುಂದಾರ್ ಶಾ ಅವರು ಇತ್ತೀಚೆಗಷ್ಟೇ ಕನ್ನಡಪರ ಸಂಘಟನೆಗಳ ಕುರಿತು ಅವಹೇಳನಕಾರಿ ಟ್ವೀಟ್ ಮಾಡಿ ಕನ್ನಡ ಸಂಘಟನೆಗಳ ವಿರೋಧ ಎದುರಿಸಿದ್ದರು. ಈ ಹಿನ್ನೆಲೆಯಲ್ಲಿ ಶನಿವಾರ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿರುವುದು ಮಹತ್ವ ಪಡೆದಿದೆ.

Comments

Leave a Reply

Your email address will not be published. Required fields are marked *