ಪಾಕಿಸ್ತಾನಕ್ಕೆ ಜೈ ಅಂದಿದ್ದ ದೇಶದ್ರೋಹಿ ಗ್ಯಾಂಗ್ ರಿಲೀಸ್

ಹುಬ್ಬಳ್ಳಿ: ನಗರದ ಪ್ರತಿಷ್ಠಿತ ಕೆಎಲ್‍ಇ ಕಾಲೇಜಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣದಲ್ಲಿ ಬಂಧಿಸಲಾಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ವಿದ್ಯಾರ್ಥಿಗಳು ಅಮಾನತು

CRPC 169 ಬಾಂಡ್ ಮೇಲೆ ಗೋಕುಲ್ ರೋಡ್ ಠಾಣೆ ಪೊಲೀಸರು ಬಿಡುಗಡೆ ಮಾಡಿದ್ದಾರೆ. ಕಳೆದ ರಾತ್ರಿ ಬಿಡುಗಡೆ ಮಾಡಿ ಕಳುಹಿಸಿಕೊಟ್ಟಿದ್ದಾರೆ. ಎಂಜಿನಿಯರಿಂಗ್ ವಿದ್ಯಾರ್ಥಿಗಳಾದ ಅಮಿರ್, ತಾಲೀಬ್, ಬಾಸಿತ್ ಅವರನ್ನು ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ.

ವಿದ್ಯಾರ್ಥಿಗಳ ಬಗ್ಗೆ ಕಾಲೇಜು ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳು ಬಾಂಡ್ ಬರೆದು ಕೊಟ್ಟಿದ್ದಾರೆ. ಪೊಲೀಸರ ವಿಚಾರಣೆಗೆ ಸಹಕಾರ ನೀಡುವಂತೆ ಬಾಂಡ್ ಪತ್ರದಲ್ಲಿ ಬರೆಸಿಕೊಂಡು ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ಆರ್.ದಿಲೀಪ್ ಸ್ಪಷ್ಟಪಡಿಸಿದ್ದಾರೆ.

ವಿದ್ಯಾರ್ಥಿಗಳು ಬೆಳಗಾವಿಗೆ ಶಿಪ್ಟ್?
ಐಪಿಸಿ ಸಿಕ್ಷನ್ ಸಿಆರ್ ನಂ. 10/202ಯು/ಎಸ್124ಎ, 153ಎ(ಬಿ), 153ಬಿ(ಸಿ), 505(2), ಆರ್/ಡಬ್ಲು34ರ ಅಡಿಯಲ್ಲಿ ದೇಶದ್ರೋಹ, ಪ್ರಾದೇಶಿಕ ಗುಂಪುಗಳ ನಡುವೆ ದ್ವೇಷ ಭಾವನೆ ಹೆಚ್ಚಿಸುವುದು ಸೇರಿದಂತೆ ಐದು ಪ್ರಕರಣವನ್ನು ಯುವಕರ ವಿರುದ್ಧ ದಾಖಲಿಸಲಾಗಿತ್ತು. ಇದೀಗ ಮೂವರು ವಿದ್ಯಾರ್ಥಿಗಳು ಬೆಳಗಾವಿಗೆ ಶಿಪ್ಟ್ ಮಾಡಲಾಗಿದೆ. ಕೆಎಲ್‍ಇ ಕಾಲೇಜು ಆಡಳಿತ ಮಂಡಳಿ ವಾಹನದಲ್ಲಿಯೇ ಬೆಳಗಾವಿಗೆ ಶಿಪ್ಟ್ ಮಾಡಲಾಗಿದ್ದು, ಮತ್ತಷ್ಟು ಅನುಮಾನಗಳನ್ನು ಹುಟ್ಟು ಹಾಕಿದೆ.

ಏನಿದು ಘಟನೆ?
ಪುಲ್ವಾಮಾ ದಾಳಿಯಾಗಿ ಶುಕ್ರವಾರಕ್ಕೆ ಒಂದು ವರ್ಷವಾದ ಬೆನ್ನಲ್ಲೇ ಕಾಶ್ಮೀರ ಮೂಲದ ಅಮೀರ್, ತಾಲೀಬ್ ಮತ್ತು ಬಸೀತ್ ಪಾಕಿಸ್ತಾನ ಸೇನೆಯ ಹಾಡಿಗೆ ಧ್ವನಿಗೂಡಿಸಿ ಪಾಕಿಸ್ತಾನ ಜಿಂದಾಬಾದ್ ಎನ್ನುವ ವಿಡಿಯೋ ಮಾಡಿ ಮೊಬೈಲ್ ಸ್ಟೇಟಸ್ ಹಾಕಿಕೊಂಡಿದ್ದರು. ಈ ಮೂವರು ಕೆಎಲ್‍ಇ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಶನಿವಾರ ವಿಡಿಯೋ ವೈರಲ್ ಆಗುತ್ತಿದ್ದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕಾಲೇಜಿಗೆ ಮುತ್ತಿಗೆ ಹಾಕಿ, ವಿದ್ಯಾರ್ಥಿಗಳನ್ನು ಬಂಧಿಸಿ ದೇಶದ್ರೋಹದ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನೆ ಮಾಡಿದಲ್ಲದೇ ವಿದ್ಯಾರ್ಥಿಗಳನ್ನ ಥಳಿಸಿದ್ದರು.

Comments

Leave a Reply

Your email address will not be published. Required fields are marked *