ಚುನಾವಣಾ ರಾಜಕೀಯಕ್ಕೆ ರಾಜಣ್ಣ ನಿವೃತ್ತಿ

ಮೈಸೂರು: ಚುನಾವಣಾ  ರಾಜಕೀಯಕ್ಕೆ ಸಹಕಾರ ಸಚಿವ ಕೆಎನ್‌ ರಾಜಣ್ಣ (KN Rajanna) ನಿವೃತ್ತಿ ಹೇಳಿದ್ದಾರೆ.

ಹುಣಸೂರಿನಲ್ಲಿ ಮಾತನಾಡಿದ ಅವರು, ನನಗೆ 75 ವರ್ಷ ಆಯ್ತು, ಮುಂದೆ ಚುನಾವಣೆಗೆ (Election) ಸ್ಪರ್ಧೆ ಮಾಡುವುದಿಲ್ಲ. ಆದರೆ ಸಹಕಾರಿ ಕ್ಷೇತ್ರ, ಸಕ್ರೀಯ ರಾಜಕಾರಣದಲ್ಲಿ ಇರುತ್ತೇನೆ ಎಂದು ತಿಳಿಸಿದರು.

ಪಟ್ಟಭದ್ರರ ಹಿಡಿತದಿಂದ ಸಹಕಾರ ಕ್ಷೇತ್ರ ಮುಕ್ತಕ್ಕೆ ಕ್ರಮ ಕೈಗೊಳ್ಳುತ್ತೇವೆ. ನಮ್ಮ ರಾಜ್ಯಕ್ಕೆ ಸಂಬಂಧಿಸಿದಂತೆ ಸಹಕಾರ ಕ್ಷೇತ್ರದ ಕಾಯ್ದೆಗೆ ತಿದ್ದುಪಡಿಗಾಗಿ ಕೇಂದ್ರಕ್ಕೆ ಕಳುಹಿಸುವ ಅವಶ್ಯಕತೆಯಿಲ್ಲ. ಈ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ ಎಂದರು. ಇದನ್ನೂ ಓದಿ: ನೀರಿನ ಬಾಟಲಿಗೆ 1 ರೂ. ಜಿಎಸ್‌ಟಿ – ರೆಸ್ಟೋರೆಂಟ್‌ಗೆ 8 ಸಾವಿರ ದಂಡ

 

ಜನರ ನಿರೀಕ್ಷೆಗೆ ತಕ್ಕಂತೆ ಎರಡೂ ಸದನಗಳ ಒಪ್ಪಿಗೆ ಪಡೆದು ತಿದ್ದುಪಡಿ ತಂದು ರಾಜ್ಯಪಾಲರ ಅಂಕಿತಕ್ಕೆ ಕಡತ ಕಳುಹಿಸಿದ್ದರೂ ಕೇಂದ್ರಕ್ಕೆ ಕಳುಹಿಸುವಂತೆ ಸೂಚಿಸಿದ್ದಾರೆ. ಆದರೆ ಈ ತಿದ್ದುಪಡಿ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವುದರಿಂದ ಕೇಂದ್ರಕ್ಕೆ ಕಳುಹಿಸುವ ಅವಶ್ಯವಿಲ್ಲ. ಈ ಬಗ್ಗೆ ಚರ್ಚಿಸಿ ಕ್ರಮವಹಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ನಿಮ್ಮ ಕೆಟ್ಟ ರಸ್ತೆಗಳಿಂದ ಕುತ್ತಿಗೆ, ಬೆನ್ನು ನೋವು – 50 ಲಕ್ಷ ಪರಿಹಾರ ಕೋರಿ ಬಿಬಿಎಂಪಿಗೆ ಲೀಗಲ್‌ ನೋಟಿಸ್‌

ಎಂಡಿಸಿಸಿ ಸೇರಿದಂತೆ ಕೆಲ ಡೈರಿ ಚುನಾವಣೆಗಳನ್ನು ಮುಂದೂಡಲಾಗಿತ್ತು. ಅಲ್ಲದೇ ಮತಪಟ್ಟಿ ಸೇರಿದಂತೆ ಕೆಲ ತಾಂತ್ರಿಕ ಕಾರಣದಿಂದಾಗಿ ಚುನಾವಣೆ ಮುಂದೂಡಲಾಗಿದೆ. ಅದನ್ನು ಹೊರತು ಪಡಿಸಿ ಬೇರೆ ಯಾವುದೇ ಕಾರಣವಿಲ್ಲ. ಸಹಕಾರಿ ಸಂಸ್ಥೆಗಳಲ್ಲಿ ವಹಿವಾಟು, ಮಹಾಸಭೆ ಸೇರಿದಂತೆ ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕೇ ವಿನಾ: ಚುನಾವಣೆಯಲ್ಲಿ ಮತ ಹಾಕಲು ಸಹಕಾರ ಸಂಸ್ಥೆ ಸದಸ್ಯತ್ವ ಪಡೆಯುವುದಲ್ಲ. ಇದರಿಂದ ಆ ಸಂಘಗಳಿಗೆ ಹೊರೆಯಾಗಲಿದೆ. ಎಲ್ಲ ಸದಸ್ಯರು ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕೆಂಬುದು ಸರ್ಕಾರದ ಉದ್ದೇಶ. ಮುಂದೆ ಎಲ್ಲಾ ಚುನಾವಣೆಗಳನ್ನು ನಡೆಸಲಾಗುವುದು ಎಂದರು.