ಮಡಿಕೇರಿ: ಜಿಲ್ಲೆಯಲ್ಲಿ ವಿಧಿಸಿದ್ದ ಲಾಕ್‍ಡೌನ್ ಮತ್ತಷ್ಟು ಸಡಿಲಗೊಂಡಿದ್ದು ವಾರದ ಎಲ್ಲಾ ದಿನಗಳು ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಜಿಲ್ಲಾಡಳಿತ ಮುಕ್ತ ಅವಕಾಶ ನೀಡಿದೆ.
ಈ ಸಂಬಂಧ ಮಾಹಿತಿ ನೀಡಿರುವ ಜಿಲ್ಲಾಡಳಿತ, ಬೆಳಿಗ್ಗೆ 7 ರಿಂದ ಸಂಜೆ 5 ರವರೆಗೆ ಅಂಗಡಿ-ಮುಂಗಟ್ಟುಗಳನ್ನು ತೆರೆಯಬಹುದು. ಬುಧವಾರದಿಂದ ಜಿಲ್ಲೆಯಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆವರೆಗೆ ಜಿಲ್ಲೆಯ ಒಳಗೆ ಮಾತ್ರವೇ ಸಂಚರಿಸಲು ಅವಕಾಶ ನೀಡಿದೆ.

ಸರ್ಕಾರಿ ಹಾಗೂ ಖಾಸಗಿ ಬಸ್‍ಗಳ ಸಂಚಾರವೂ ಪ್ರಾರಂಭವಾಗಲಿದೆ. ಆದರೆ ಒಟ್ಟು ಆಸನಗಳ ಶೇ.50 ಮೀರದಂತೆ ಪ್ರಯಾಣಿಕರ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ವಾರದ ಎಲ್ಲಾ ದಿನಗಳು ಸಿಎಲ್ 2, ಸಿಎಲ್ 11ಸಿ ಮಾದರಿಯ ಮದ್ಯದ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Leave a Reply