ರೌಡಿ ಲಕ್ಷ್ಮಣ್ ಕೊಲೆ ಆರೋಪಿ ವರ್ಷಿಣಿ ಮೇಲೆ ಕೋಕಾ ಕಾಯ್ದೆ ಪ್ರಯೋಗ!

ಬೆಂಗಳೂರು: ಮೃತ ರೌಡಿ ಲಕ್ಷ್ಮಣ್ ಪ್ರೇಯಸಿ, ಜೈಲಿನಲ್ಲಿರುವ ವರ್ಷಣಿ ವಿರುದ್ಧ ಕೋಕಾ ಕಾಯ್ದೆಯ ಅಡಿ ಪ್ರಕರಣ ದಾಖಲಿಸಲು ಸಿಸಿಬಿ ಪೊಲೀಸರು ಮುಂದಾಗಿದ್ದಾರೆ.

ಹೌದು. ವರ್ಷಿಣಿ ಅಪರಾಧ ಚಟುವಟಿಕೆಯಲ್ಲಿ ಹಾಗೂ ನಟೋರಿಯಸ್ ರೌಡಿ ಶೀಟರ್ ಹತ್ಯೆಯ ಪ್ರಮುಖ ಆರೋಪಿಯಾಗಿ ಜೈಲಿನಲ್ಲಿದ್ದಾಳೆ. ಇದೀಗ ಈಕೆಯ ಮೇಲೆ ಸಿಸಿಬಿ ಅಧಿಕಾರಿಗಳು ಕಾಯ್ದೆ ಅಡಿ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕೋಕಾ ಅಂದ್ರೆ ಏನು?:
ಕೋಕಾ ಅಂದ್ರೆ ಸಂಘಟಿತ ಅಪರಾಧಗಳ ತಡೆ ಕಾಯ್ದೆ (ಕರ್ನಾಟಕ ಕಂಟ್ರೋಲ್ ಆಫ್ ಆರ್ಗನೈಜಿಸ್ಡ್ ಕ್ರೈಮ್ಸ್ ಆಕ್ಟ್). ಸಂಘಟಿತರಾಗಿ ಅಪರಾಧ ಕೃತ್ಯ ಎಸಗಿ, ವ್ಯಕ್ತಿಯ ಸಾವಿಗೆ ಕಾರಣರಾಗುವವರಿಗೆ ಗರಿಷ್ಠ ಗಲ್ಲು ಶಿಕ್ಷೆ ಅಥವಾ ಜೀವನ ಪರ್ಯಂತ ಜೈಲು ಶಿಕ್ಷೆ ಜತೆಗೆ 1 ಲಕ್ಷ ರೂ.ಗೆ ಕಡಿಮೆ ಇಲ್ಲದಂತೆ 5 ಲಕ್ಷ ರೂ.ವರೆಗೂ ದಂಡ ವಿಧಿಸಲು ಈ ಕಾಯ್ದೆಯ ಅಡಿ ಅವಕಾಶವಿದೆ. ಆರೋಪಿಗಳಿಗೆ ಕನಿಷ್ಠ 5 ವರ್ಷ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ವ್ಯಕ್ತಿಯ ಸಾವಿಗೆ ಕಾರಣರಾಗುವವರಿಗೆ ಗರಿಷ್ಠ ಗಲ್ಲು ಶಿಕ್ಷೆಯನ್ನೂ ವಿಧಿಸಬಹುದು.

ಗೌರಿ ಹತ್ಯೆ ಪ್ರಕರಣವನ್ನು ನಡೆಸಿದ್ದ ವಿಶೇಷ ತನಿಖಾ ತಂಡ ಆರೋಪಿಗಳ ಮೇಲೆ ಕೋಕಾ ಕಾಯ್ದೆಯನ್ನು ಪ್ರಯೋಗಿಸಿದೆ. ಈ ಹಿಂದೆ ಪಿಯುಸಿ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಹಿನ್ನೆಲೆಯಲ್ಲಿ 2019ರ ಪರೀಕ್ಷೆಯ ವೇಳೆ ಯಾರಾದರೂ ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡಿದ್ದಲ್ಲಿ ಅವರ ವಿರುದ್ಧ ಕೋಕಾ ಕಾಯ್ದೆಯನ್ನು ಹಾಕಲಾಗುವುದು ಎಂದು ಪ್ರಾಥಮಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಸುದ್ದಿಗೋಷ್ಠಿ ನಡೆಸಿ ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ: ಕೊನೆಗೂ ರೌಡಿ ಲಕ್ಷ್ಮಣ್ ಕೊಲೆ ಹಿಂದಿನ ರಹಸ್ಯ ಬಯಲು – ಮೂರು ಕಾರಣಕ್ಕೆ ಹತ್ಯೆಯ ಸ್ಕೆಚ್

ಅಸಲಿಗೆ ಶೋರೂಂ ಫೋಟೋವನ್ನು ಪ್ರಿಯಕರ ರೂಪೇಶ್ ವರ್ಷಿಣಿಗೆ ಕಳುಹಿಸಿ ಕೊಲೆ ಮಾಡಲು ಸಿದ್ಧವಾಗಿದ್ದನು. ಗೆಳತಿ ಶೋರೂಂ ಬಳಿ ತನಗಾಗಿ ಕಾಯುತ್ತಿದ್ದಾಳೆ ಎಂದು ತಿಳಿದು ಲಕ್ಷ್ಮಣ್ ವರ್ಷಿಣಿ ತಿಳಿಸಿದ ಸ್ಥಳಕ್ಕೆ ಬಂದಿದ್ದನು. ಶೋರೂಂ ಬಳಿ ಲಕ್ಷ್ಮಣ್ ಬಂದ ಕೂಡಲೇ ರೌಡಿಗಳು ಆತನ ಮೇಲೆ ಮುಗಿಬಿದ್ದು ಹತ್ಯೆ ಮಾಡಿದ್ದರು. ಈ ಪ್ರಕರಣಕ್ಕೆ ಹಲವು ಟ್ವಿಸ್ಟ್ ಸಿಕ್ಕಿದ್ದು, ಸದ್ಯ ಪ್ರಮುಖ ಆರೋಪಿಯಾಗಿರುವ ವರ್ಷಿಣಿ ಜೈಲಿನಲ್ಲಿದ್ದಾಳೆ.

Comments

Leave a Reply

Your email address will not be published. Required fields are marked *