ಕೊಪ್ಪಳ: ಪೈಲಟ್, ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರು ಪಾಕ್ ಕಪಿಮುಷ್ಠಿಯಿಂದ ಬಿಡುಗಡೆಯಾಗಿ ತಾಯ್ನಾಡಿಗೆ ಮರಳುತ್ತಿದ್ದಂತೆಯೇ ಇದೀಗ ವೀರಪುತ್ರನ ಹೆಸರನ್ನು ಹುಟ್ಟಿದ ಮಕ್ಕಳಿಗೆ ಇಡಲಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಕೊಪ್ಪಳದ ಮಗುವಿಗೆ ಕೂಡ ಅಭಿನಂದನ್ ಹೆಸರನ್ನು ನಾಮಕರಣ ಮಾಡಲಾಗಿದೆ.
ಹೌದು. ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ದಂಪತಿ ವಿಂಗ್ ಕಮಾಂಡರ್ ಅಭಿನಂದನ್ ಗೌರವಾರ್ಥ ನಾಮಕರಣ ಮಾಡಿದ್ದಾರೆ. ಮಹಾಂತೇಶ್ ಶೆಟ್ಟರ್ ಹಾಗೂ ಶಾಂತಾ ಶೆಟ್ಟರ್ ದಂಪತಿ ತಮ್ಮ ಪುತ್ರನಿಗೆ ಅಭಿನಂದನ್ ಎಂದು ಹೆಸರಿಟ್ಟಿದ್ದಾರೆ. ಇದನ್ನೂ ಓದಿ: ತಮ್ಮ ಮಗುವಿಗೆ ಅಭಿನಂದನ್ ಎಂದು ಹೆಸರಿಟ್ಟ ದಂಪತಿ

ದಂಪತಿ ಈ ಮುಂಚೆ ತಮ್ಮ ಪುತ್ರನಿಗೆ ಅಥರ್ವ ಅಥವಾ ಅಭಿನವ ಎಂದು ನಾಮಕರಣ ಮಾಡುವುದಾಗಿ ನಿರ್ಧರಿಸಿದ್ದರು. ಆದ್ರೆ ಇತ್ತೀಚೆಗೆ ಅಭಿನಂದನ್ ಮಾಡಿದ ಸಾಹಸಕ್ಕೆ ಇಡೀ ದೇಶವೇ ಮೆಚ್ಚುಗೆ ವ್ಯಕ್ತಪಡಿಸಿದೆ. ಈ ಹಿನ್ನಲೆಯಲ್ಲಿ ಮೂರು ತಿಂಗಳ ಗಂಡುಮಗುವಿಗೆ ಅಭಿನಂದನ್ ಎಂದು ನಾಮಕರಣ ಮಾಡಿರುವುದಾಗಿ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಪಾಕ್ ಮೇಲೆ ಏರ್‌ಸ್ಟ್ರೈಕ್- ಮಗುವಿಗೆ `ಮಿರಾಜ್ ಸಿಂಗ್’ ಹೆಸರಿಟ್ಟ ರಾಜಸ್ಥಾನ ದಂಪತಿ..!

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply