ಕೊಪ್ಪಳ: ಸರ್ಕಾರಿ ಸಾರಿಗೆ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದು ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಗಂಗಾವತಿ ತಾಲೂಕಿನ ಶ್ರೀರಾಮನಗರದ ಬಳಿ ನಡೆದಿದೆ.
ಗಂಗಾವತಿ ತಾಲೂಕಿನ ಸತೀಶ್ (28) ಹಾಗೂ ಜಾಫರ್ (30) ಮೃತಪಟ್ಟಿದ್ದಾರೆ. ಇಬ್ಬರೂ ಮೆಡಿಕಲ್ ರೆಪ್ರೆಸೆಂಟೇಟಿವ್ ಆಗಿದ್ದರು. ಅದೃಷ್ಟವಶಾತ್ ಬಸ್‍ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಪ್ರಾಣ ಹಾನಿಯಾಗಿಲ್ಲ.

ಸತೀಶ್ ಹಾಗೂ ಜಾಫರ್ ಇಂದು ಗಂಗಾವತಿಯಿಂದ ಕಾರಟಗಿಗೆ ಬೈಕ್‍ನಲ್ಲಿ ತೆರಳುತ್ತಿದ್ದರು. ಇದೇ ವೇಳೆ ಕಾರಟಗಿಯಿಂದ ಗಂಗಾವತಿ ಕಡೆಗೆ ಹೋಗುತ್ತಿದ್ದ ಬಸ್‍ಗೆ ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಡಿಕ್ಕಿಯ ರಭಸಕ್ಕೆ ಇಬ್ಬರು ದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಸಂಬಂಧ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಲಾಗಿದೆ. ಮೃತ ಯುವಕರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Leave a Reply