ಸಿಎಎ ಬಗ್ಗೆ ಬಿಜೆಪಿಗರ ಜಾಗೃತಿ – ಮನೆಗೆ ಮುತ್ತಿಗೆ ಹಾಕಿ ಮುಸ್ಲಿಂ ಯುವಕರ ಆಕ್ರೋಶ

ಕೊಪ್ಪಳ: ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಸಾರ್ವಜನಿಕವಾಗಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸುತ್ತಿದ್ದ ವೇಳೆ ಬಿಜೆಪಿ ಮುಖಂಡರ ವಿರುದ್ಧ ನೂರಾರು ಮುಸ್ಲಿಂ ಯುವಕರು ದಾಳಿಗೆ ಯತ್ನಿಸಿದ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಗಂಗಾವತಿ ನಗರದ ಕಿಲ್ಲಾ ಪ್ರದೇಶದ ಐದನೇ ವಾರ್ಡ್ ಈದ್ಗಾ ಕಾಲೋನಿ ಸಮೀಪದ ಸಮುದಾಯ ಭವನದ ಬಳಿ ಈ ಘಟನೆ ನಡೆದಿದೆ. ಈ ಪ್ರದೇಶದಲ್ಲಿ ಮುಸಲ್ಮಾನರ ಸಂಖ್ಯೆ ಹೆಚ್ಚಿದೆ. ಬಿಜೆಪಿ ಮುಖಂಡ ಪಾಂಡು ಅವರು ಸ್ಥಳಿಯರ ವಿರೋಧದ ನಡುವೆಯೂ ಪೌರತ್ವ ತಿದ್ದುಪಡಿ ಕಾಯ್ದೆ, ಎನ್‍ಆರ್‍ಸಿ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುಲು ಮುಂದಾಗಿದ್ದರು. ಈ ವೇಳೆ ಕೆಲ ಮುಸ್ಲಿಂ ಯುವಕರು ಬಿಜೆಪಿ ಮುಂಖಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇದರಿಂದಾಗಿ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಬಗ್ಗೆ ಮಾಹಿತಿ ತಿಳಿದ ಕೆಲ ಬಿಜೆಪಿ ಮುಖಂಡರು ಸ್ಥಳಕ್ಕೆ ಆಗಮಿಸಿದರು. ಇದರಿಂದ ಕೆರಳಿದ ನೂರಾರು ಯುವಕರು ಬಿಜೆಪಿ ಮುಖಂಡರಿದ್ದ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸ್ಥಳದಲ್ಲಿ ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿತ್ತು. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿ, ಬಿಜೆಪಿ ಮುಖಂಡರನ್ನು ಸುರಕ್ಷಿತವಾಗಿ ಸ್ಥಳದಿಂದ ಕಳುಹಿಸಿದರು. ಈ ವೇಳೆ ಯುವಕರು ಪೌರತ್ವ ತಿದ್ದುಪಡಿ ಕಾಯ್ದೆ, ಬಿಜೆಪಿ, ಪ್ರಧಾನಿ ಮೋದಿ ಹಾಗೂ ಸಂಘಪರಿವಾರದ ವಿರುದ್ಧ ಘೋಷಣೆ ಕೂಗಿದರು.

Comments

Leave a Reply

Your email address will not be published. Required fields are marked *